ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದಲ್ಲಿ ಭಾರೀ ಭದ್ರತಾಲೋಪ ಉಂಟಾಗಿರುವುದು ತಿಳಿದು ಬಂದಿದೆ.
ಸಂವಿಧಾನದ ಆಶಯ ಜಾಗೃತಿಗೊಳಿಸುವ ಸದುದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ನಿಮಿತ್ತ ಬೆಂಗಳೂರು ವಿಧಾನಸೌಧದ ಮುಂಭಾಗ ಹಮ್ಮಿಕೊಳ್ಳಲಾದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದರು. ಬೀದರ್‌ನಿಂದ ಚಾಮರಾಜನಗರದವರೆಗೆ ಏಕಕಾಲಕ್ಕೆ ಹಮ್ಮಿಕೊಂಡ ಬೃಹತ್ ಮಾನವ ಸರಪಳಿಗೆ ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ನಗಾರಿ ಬಾರಿಸುವ ಮೂಲಕ ಸಿಎಂ ಚಾಲನೆ ನೀಡಿದರು. ಈ ಮೂಲಕ 2,500 ಕಿಮೀ ಉದ್ದದ ಮಾನವ ಸರಪಳಿ ನಿರ್ಮಿಸಿ ವಿಶ್ವದಾಖಲೆಗೆ ಸರ್ಕಾರ ಮುಂದಾಗಿದೆ.
ಇನ್ನುಕಾರ್ಯಕ್ರಮದ ವೇಳೆ ಯುವಕನೊಬ್ಬ ಸಿಎಂ ಸಿದ್ದರಾಮಯ್ಯಗೆ ಶಾಲು ಹಾಕಲು ವೇದಿಕೆಗೆ ನುಗ್ಗಿದ್ದಾನೆ. ಯುವಕ ಓಡಿ ಬರ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಗಲಿಬಿಲಿಗೊಂಡಿದ್ದಾರೆ. ಈ ವೇಳೆ ವೇದಿಕೆಯಲ್ಲಿದ್ದ ಭದ್ರತಾ ಸಿಬ್ಬಂದಿಗಳು ಸ್ಟೇಜ್ ಮೇಲೆ ನುಗ್ಗಿದ ಯುವಕನನ್ನ ದರದರನೇ ಎಳೆದೊಯ್ದಿದ್ದಾರೆ. ವಶಕ್ಕೆ ಪಡೆದ ಯುವಕನನ್ನು ಮಹಾದೇವ್ ನಾಯಕ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಕೇವಲ 1 ಸೆಂಟಿಮೀಟರ್ ಅಂತರದಲ್ಲಿ ನೀರಜ್ ಕೈತಪ್ಪಿದ ಡೈಮಂಡ್ ಲೀಗ್ ಕಿರೀಟ..!
Post Views: 93