ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಅಬ್ಬರದ ಪ್ರಚಾರ ನಡೆಸುತ್ತಿದೆ. ಎರಡು ಪಕ್ಷಗಳ ಪ್ರಚಾರ ವೈಖರಿಯಲ್ಲಿ ಸಾಕಷ್ಟು ಭಿನ್ನತೆ ಇದೆ.
ಇದೀಗ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಸಿಎಂ ಸಿದ್ದರಾಮಯ್ಯ ರೋಡ್ ಶೋ ನಡೆಸುತ್ತಿದ್ದಾರೆ. ಪ್ರಚಾರಕ್ಕೆ ಇಳಿದಿರುವ ಸಿಎಂ ಬೆಂಗಳೂರಿನಿಂದ ಹೈಟೆಕ್ ಬಸ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದಾರೆ. ಈ ಹೈಟೆಕ್ ಬಸ್ನಲ್ಲಿ 6 ಸೀಟು, 1 ಕಾಟ್ ಹಾಗೂ ವಾಶ್ ರೂಂ ವ್ಯವಸ್ಥೆಯನ್ನು ಮಾಡಲಾಗಿದೆ.
ಚಿಕ್ಕಬಳ್ಳಾಪುರಕ್ಕೆ ತೆರಳಿದ ಸಿಎಂ ಬಹಿರಂಗ ಸಭೆ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ವಿರುದ್ಧ ಗುಡುಗಿದ್ದಾರೆ. ಸುಧಾಕರ್ ಭ್ರಷ್ಟ ಅಂತ ವಿಧಾನಸಭೆಯಲ್ಲಿ ಸೋಲಿಸಿದ್ದಾರೆ. ಹಿಂದೆ ತಿರಸ್ಕರಿಸಿದ ಸುಧಾಕರ್ನನ್ನು ಮತ್ತೆ ಗೆಲ್ಲಿಸ್ತೀರಾ? ಎಂದು ಪ್ರಶ್ನಿಸಿದ್ದಾರೆ.
ಆರೋಗ್ಯ ಸಚಿವರಾಗಿದ್ದ ಸುಧಾಕರ್ ಭ್ರಷ್ಟಾಚಾರ ಮಾಡಿದ್ದಾರೆ. ಇವರ ಭ್ರಷ್ಟಾಚಾರದ ಬಗ್ಗೆ ನ್ಯಾಯಾಂಗ ಆಯೋಗ ರಚನೆ ಮಾಡಿದ್ದೇವೆ. ಸುಧಾಕರ್ ವಿರುದ್ಧ ತನಿಖೆ ಪ್ರಗತಿಯಲ್ಲಿದೆ. ಈ ಬಾರಿಯ ಚುನಾವಣೆಯಲ್ಲೂ NDA ಅಭ್ಯರ್ಥಿಯನ್ನ ಮತ್ತೊಮ್ಮೆ ಸೋಲಿಸಿ ಮನೆಗೆ ಕಳಿಸಿ ಎಂದು ಚಿಕ್ಕಬಳ್ಳಾಪುರದಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರದ ಭಾಷಣ ಮಾಡಿದ್ದಾರೆ.
ಇದನ್ನೂ ಓದಿ : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ : ವಿಜಯೇಂದ್ರ ಹೇಳಿಕೆ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿ..!