Download Our App

Follow us

Home » ರಾಜಕೀಯ » ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಮತ ಚಲಾಯಿಸಿದ ಸಿಎಂ ಸಿದ್ದರಾಮಯ್ಯ..!

ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಮತ ಚಲಾಯಿಸಿದ ಸಿಎಂ ಸಿದ್ದರಾಮಯ್ಯ..!

ಮೈಸೂರು : ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಯು ಇಂದು ಭರದಿಂದ ಸಾಗುತ್ತಿದ್ದು, ಸಿಎಂ ಸಿದ್ದರಾಮಯ್ಯನವರು ಸಿದ್ದರಾಮನಹುಂಡಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ. ಈ ವೇಳೆ ಪುತ್ರ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಇದ್ದರು. ಮತದಾನದ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ ಎಂದಿದ್ದಾರೆ.

ನಿನ್ನೆ ಹಾಗೂ ಮೊನ್ನೆ 2ನೇ ಹಂತದ ಚುನಾವಣೆ ಇರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದೆ. ಈ ವೇಳೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಬೀದರ್ ಹಾಗೂ ಕಲಬುರಗಿ ಎರಡು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.

ಗುಪ್ತ ಮತದಾನವಾಗಿದ್ದರಿಂದ 14 ಕ್ಷೇತ್ರಗಳಲ್ಲಿ ಎಷ್ಟು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬುದನ್ನು ಹೇಳೋಕೆ ಆಗಲ್ಲ. ಆದರೆ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತೇವೆ. ಚಾಮರಾಜನಗರ ಹಾಗೂ ಮೈಸೂರಿನಲ್ಲಿಯೂ ಗೆಲುವು ಸಾಧಿಸುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ : ಕುಟುಂಬ ಸಮೇತ ಬಂದು ಹಕ್ಕು ಚಲಾಯಿಸಿದ ಹೆಚ್​.ಡಿ ಕುಮಾರಸ್ವಾಮಿ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here