ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಇದೀಗ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 23ಕ್ಕೆ ನಿಗದಿಪಡಿಸಿದೆ.
ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದು, ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಮುಡಾ ಕೇಸ್ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾ ಮಾಡಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠವು ನವೆಂಬರ್ 23ರಂದು ವಿಚಾರಣೆ ನಡೆಸಲಿದೆ.
ಗುರುವಾರ ಹೈಕೋರ್ಟ್‌ನ ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರಿದ್ದ ಪೀಠಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ, ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ, ಈವರೆಗೂ ವಿಚಾರಣೆಗೆ ನಿಗದಿಯಾಗಿಲ್ಲ. ಅಲ್ಲದೆ, ಮೇಲ್ಮನವಿ ವಿಚಾರಣೆ ತುರ್ತಾಗಿದ್ದು, ಶೀಘ್ರದಲ್ಲಿ ವಿಚಾರಣೆಗೆ ನಿಗದಿ ಪಡಿಸಬೇಕು ಎಂದು ಮನವಿ ಮಾಡದ್ದರು.
ಇದನ್ನೂ ಓದಿ : ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ಬಾಸ್ ಖ್ಯಾತಿಯ ಮಂಜು ಪಾವಗಡ.. ಫೋಟೋಸ್ ವೈರಲ್..!