ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತ್ಯಗೊಂಡಿದೆ. ಇದರ ತೀರ್ಪನ್ನು ಕಾಯ್ದಿರಿಸಿರುವ ರಾಜ್ಯ ಹೈಕೋರ್ಟ್ ಇದೀಗ ತೀರ್ಪು ಪ್ರಕಟಿಸಿದ್ದು, ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್ ಎದುರಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ದಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿ ಆದೇಶಿಸಿದೆ.
ಮೈಸೂರಿನ ಮುಡಾ ಸೈಟ್ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಶನ್ಗೆ ಅನುಮತಿ ನೀಡಿದ್ದರು. ಆರ್ಟಿಐ ಕಾರ್ಯಕರ್ತ ಹಾಗೂ ವಕೀಲ ಟಿಜೆ ಅಬ್ರಾಹಾಂ ಸಲ್ಲಿಸಿದ್ದ ಖಾಸಗಿ ದೂರನ್ನು ಸ್ವೀಕರಿಸಿದ್ದ ರಾಜ್ಯಪಾಲರು ಪ್ರಾಸಿಕ್ಯೂಶನ್ಗೆ ಅನುಮತಿಸಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಶನ್ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ, ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ ಕೋರ್ಟ್ ತೀರ್ಪ ಅನ್ನು ಇವತ್ತಿಗೆ ಕಾಯ್ದಿರಿಸಿತ್ತು. ಅದರಂತೆ ಹೈಕೋರ್ಟ್ನಿಂದ ಆದೇಶ ಬಂದಿದೆ.
ನ್ಯಾಯಾಲಯದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಸುಪ್ರೀಂಕೋರ್ಟ್ನ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಹಾಗೂ ಪ್ರೊ.ರವಿಕುಮಾರ್ ವರ್ಮಾ ಅವರು ವಾದ ಮಂಡನೆ ಮಾಡಿದ್ದರು. ಇನ್ನು ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು. ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ್ದ ನ್ಯಾ.ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿತ್ತು, ಇಂದು ಅರ್ಜಿ ವಜಾಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇದನ್ನೂ ಓದಿ : ಗೇಟ್ ಬಿದ್ದು ಬಾಲಕ ಸಾವು ಪ್ರಕರಣ – BBMP ಸಹಾಯಕ ಇಂಜಿನಿಯರ್ ಸಸ್ಪೆಂಡ್..!