ಬೆಂಗಳೂರು : ರಾಜಕಾರಣಿ, ಅಧಿಕಾರಿ ಇಬ್ಬರೂ ಜನಸೇವಕರೇ, ಇದನ್ನು ಅಧಿಕಾರಿಗಳು ಯಾರೂ ಮರೆಯಬಾರದು. ಡೆಂಘೀ ಕೇಸ್ಗಳನ್ನು ನಿಯಂತ್ರಿಸುವ ಸಂಬಂಧ ಕ್ರಮ ಕೈಗೊಳ್ಳಿ, DC, DHOಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಎಂದು IAS ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ವಾರ್ನಿಂಗ್ ಕೊಟ್ಟಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು ಡಿಸಿ-ಎಸ್’ಪಿ-ಸಿಇಒ ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಎಂದು ಹೇಳಿದರು.
ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. ಜಿಲ್ಲಾಧಿಕಾರಿಗಳು, ಜಿಲ್ಲಾ ವೈದ್ಯಾಧಿಕಾರಿಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಬೇಕು. ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇಂದಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಬೆಂಗಳೂರಿಗೆ ಖತರ್ನಾಕ್ ಗ್ಯಾಂಗ್ ಎಂಟ್ರಿ : ಗ್ಯಾಸ್ ಕಟರ್ ಬಳಸಿ ಎಟಿಎಂನಿಂದ ಲಕ್ಷ-ಲಕ್ಷ ಹಣ ಕದ್ದು ಪರಾರಿ..!