Download Our App

Follow us

Home » ರಾಜಕೀಯ » ಈ ಗೆಲುವು ಕಾಂಗ್ರೆಸ್​ಗೆ ಸಿಕ್ಕಿರುವ ದಿಗ್ವಿಜಯ – ಫಲಿತಾಂಶದ ಸಂಭ್ರಮ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ..!

ಈ ಗೆಲುವು ಕಾಂಗ್ರೆಸ್​ಗೆ ಸಿಕ್ಕಿರುವ ದಿಗ್ವಿಜಯ – ಫಲಿತಾಂಶದ ಸಂಭ್ರಮ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಮತದಾರರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ‘ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು.

ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ. ಯೋಗೇಶ್ವ‌ರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ.

ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು’ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : 30 ವರ್ಷಗಳ ಬಳಿಕ ಶಿಗ್ಗಾಂವಿ ಕಾಂಗ್ರೆಸ್​ ತೆಕ್ಕೆಗೆ.. ಯಾಸಿರ್ ​ಪಠಾಣ್ ​ಜಯಭೇರಿ – ಮುಗ್ಗರಿಸಿದ ಭರತ್..!

Leave a Comment

DG Ad

RELATED LATEST NEWS

Top Headlines

ನಟ ದರ್ಶನ್​ಗೆ ನಾಳೆ ನಿರ್ಣಾಯಕ ದಿನ – ಏನಾಗಲಿದೆ ಬೇಲ್ ಭವಿಷ್ಯ?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿರುವ ನಟ ದರ್ಶನ್​​ಗೆ ನಾಳೆ ನಿರ್ಣಾಯಕ ದಿನವಾಗಿದೆ. ಮಧ್ಯಂತರ ಜಾಮೀನು ಪಡೆದು ಜೈಲಿಂದ ಹೊರಗೆ ಬಂದಿರುವ ನಟ ದರ್ಶನ್ ಸದ್ಯ

Live Cricket

Add Your Heading Text Here