ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದು, ಬೆಳಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮೀಟಿಂಗ್ ನಡೆಯಲಿದೆ. ಲೋಕಸಭೆ ಚುನಾವಣೆ ನಂತ್ರ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆಯ ಸಭೆ ಕರೆದಿದ್ದು, ಸಭೆಯಲ್ಲಿ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟ ಅನುದಾನ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ.
ಇಲ್ಲಿವರೆಗೂ ಗ್ಯಾರಂಟಿ ಖರ್ಚಾದ ಹಣ ಎಷ್ಟು? ಬಾಕಿ ಹಣ ಎಷ್ಟು? ಎಂಬ ಚರ್ಚೆ? ಅದೇ ರೀತಿ ಗ್ಯಾರಂಟಿಗಳಿಗೆ ಅನುದಾನ ಹೊಂದಾಣಿಕೆ ಬಗ್ಗೆಯೂ ಚರ್ಚೆ ಸಾಧ್ಯತೆಯಿದೆ. ಇನ್ನು ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟ ಅನುದಾನ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆಯಿದೆ.
ಇನ್ನು ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿ ಹಿನ್ನೆಲೆ, ಇಂದು ಸಿಎಂ ಸಿದ್ದರಾಮಯ್ಯ ಅವರು ಮಧ್ಯಾಹ್ನ 12 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಅಧಿಕಾರಿಗಳಿಂದ ಸಿಎಂ ಹಾಗೂ ಡಿಸಿಎಂ ಜಂಟಿಯಾಗಿ ಮಳೆ ಹಾನಿ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹ ಮಾಡಲಿದ್ದಾರೆ. ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ, ಸಿಇಓ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಸಭೆಯಲ್ಲಿ ಆಯಾ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿಯಾದ ಸಾರ್ವಜನಿಕ ಆಸ್ತಿ ಪಾಸ್ತಿ ಬಗ್ಗೆ ಮಾಹಿತಿ ಸಂಗ್ರಹ ಮಾಡಲಿದ್ದು, ರಸ್ತೆ, ಸೇತುವೆ, ಕಟ್ಟಡ, ವಿದ್ಯುತ್ ಕಂಬ, ಜಲಾಶಯಗಳು ಸೇರಿದಂತೆ ಬಾಕಿ ಉಳಿದ ತೆರವು ಮತ್ತು ಹಾನಿ ಪ್ರದೇಶಗಳ ಪರಿಹಾರ ಕಾರ್ಯ ಕುರಿತು ಅಧಿಕಾರಿಗಳೊಂದಿಗೆ ಸಿಎಂ-ಡಿಸಿಎಂ ಚರ್ಚೆ ನಡೆಸಲಿದ್ದಾರೆ. ಅದರಂತೆ ಮುಂಬರುವ ಮಳೆಯ ಅಗತ್ಯ ಮುಂಜಾಗ್ರತಾ ಕ್ರಮದ ಕುರಿತು ಚರ್ಚೆ ನಡೆಸಲಿದ್ದಾರೆ.