Download Our App

Follow us

Home » ಮೆಟ್ರೋ » ಬೆಂಗಳೂರು : ಬನಶಂಕರಿ ಸರ್ಕಾರಿ ಹಾಸ್ಟೆಲ್​​ನ ಆಹಾರದಲ್ಲಿ ಜಿರಳೆ ಪತ್ತೆ..!

ಬೆಂಗಳೂರು : ಬನಶಂಕರಿ ಸರ್ಕಾರಿ ಹಾಸ್ಟೆಲ್​​ನ ಆಹಾರದಲ್ಲಿ ಜಿರಳೆ ಪತ್ತೆ..!

ಬೆಂಗಳೂರು : ವಿದ್ಯಾರ್ಥಿಗೆ ಬಡಿಸಿದ ಆಹಾರದಲ್ಲಿ ಜಿರಳೆ ಪತ್ತೆಯಾದ ಘಟನೆ ಬೆಂಗಳೂರಿನ ಬನಶಂಕರಿ ಸರ್ಕಾರಿ ಹಾಸ್ಟೆಲ್‌ನಲ್ಲಿ ನಡೆದಿದೆ. ಇದು ಪದವಿ ವಿದ್ಯಾರ್ಥಿಗಳಿಗಾಗಿ ಇರುವ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್‌ ಆಗಿದೆ.

ಸುಮಾರು 450 ಜ‌ನ ವಿದ್ಯಾರ್ಥಿಗಳು ಇರುವ ಹಾಸ್ಟೆಲ್‌ನಲ್ಲಿದ್ದಾರೆ. ಮಧ್ಯಾಹ್ನ ಎಂದಿನಂತೆ ಊಟಕ್ಕೆ ಕುಳಿತ ವಿದ್ಯಾರ್ಥಿಗಳು. ಅನ್ನದ ಜೊತೆ ಸಾಂಬಾರು ಬಡಿಸುವಾಗ ಸತ್ತ ಜಿರಳೆ ಪತ್ತೆಯಾಗಿದೆ. ಕಳಪೆ ಆಹಾರ, ನಿರ್ಲಕ್ಷ್ಯದಿಂದ ಆಹಾರ ತಯಾರಿಸಲಾಗುತ್ತಿದೆ. ವಾರ್ಡನ್ ನಿರ್ಲಕ್ಷದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಈ ರೀತಿ ಆಗಿದ್ದರೂ ಹಾಸ್ಟೆಲ್ ಸಿಬ್ಬಂದಿಗಳು ಎಚ್ಚೆತ್ತುಕೊಂಡಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಈ ಬಾರಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕಮಿಷನರ್ ಸ್ಥಳಕ್ಕೆ ಆಗಮಿಸಿ ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡುವವರೆಗೆ ನಾವು ಹೋರಾಟ ಕೈ ಬಿಡೋಲ್ಲ, ಅಲ್ಲಿಯವರೆಗೆ ಉಪವಾಸ ಸತ್ಯಾಗ್ರಹ ಮಾಡ್ತೀವಿ ಅಂತ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ.

ಇದನ್ನೂ ಓದಿ : ರಾಜ್ಯದ 28 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ : ಇಲ್ಲಿದೆ ಪಟ್ಟಿ…!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here