Download Our App

Follow us

Home » ಸಿನಿಮಾ » ಕಲರ್ಸ್ ಕನ್ನಡದಲ್ಲಿ ಬರ್ತಿದೆ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’..!

ಕಲರ್ಸ್ ಕನ್ನಡದಲ್ಲಿ ಬರ್ತಿದೆ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’..!

ಹೊಸ ಹೊಸ ಕಥೆಗಳನ್ನು ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’.  ಈ ಹೊಸ ಧಾರಾವಾಹಿ ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಪ್ರಸಾರವಾಗಲಿದೆ.

ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ನಾಯಕ ಸಿದ್ಧಾರ್ಥ್ ಪಾತ್ರದಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು ಗುಳಿಕೆನ್ನೆಯ ಹುಡುಗ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ. ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ನಿಮ್ಮ ಮನಸೂರೆಗೊಳ್ಳಲು ಕಾದಿದ್ದಾರೆ.

‘ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದು ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಮತ್ತೊಂದು ಹೆಗ್ಗಳಿಕೆ.

ಈ ಧಾರಾವಾಹಿಯ ಸ್ಪೆಷಲ್ ಪಾರ್ಟನರ್ ಸ್ಪರ್ಶ್ ಮಸಾಲಾ. ಎರಡು ವಿಭಿನ್ನ ಕೌಟುಂಬಿಕ ಹಿನ್ನೆಲೆಗಳಿಂದ ಬಂದ ದೃಷ್ಟಿ ಎಂಬ ಹುಡುಗಿ ಹಾಗೂ ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಸಂಧಿಸಿದಾಗ ನಡೆಯುವ ಕುತೂಹಲಕರ ಕಥಾನಕವನ್ನು ‘ದೃಷ್ಟಿಬೊಟ್ಟು’ ಎಳೆಎಳೆಯಾಗಿ ಅನಾವರಣಗೊಳಿಸುತ್ತಾ ಹೋಗುತ್ತದೆ.

ದೃಷ್ಟಿಯ ಪಾಲಿಗೆ ರೂಪ ಅನ್ನುವುದೇ ಶಾಪ. ತನ್ನ ರೂಪವನ್ನೇ ಬದಲಾಯಿಸಿಕೊಂಡು ಬದುಕುತ್ತಿರುವ ಅವಳಿಗೆ ತನ್ನ ಸೋದರಿಯನ್ನು ಮರಳಿ ಮನೆಗೆ ಕರೆತಂದು ಕುಟುಂಬವನ್ನು ಒಂದು ಮಾಡಬೇಕೆಂಬ ಗುರಿ. ಮೊದಲು ಮೆಕಾನಿಕ್ ಆಗಿ ಈಗ ರೌಡಿಯಾಗಿರುವ ಕಥಾನಾಯಕ ದತ್ತ, ಸುಂದರವಾಗಿರುವ ಹೆಣ್ಣುಗಳನ್ನ ಕಂಡರೆ ಉರಿದು ಬೀಳುತ್ತಾನೆ. ದುರುಳ ಪೋಲೀಸನೊಬ್ಬನ ಕೈಗೆ ಸಿಕ್ಕ ದೃಷ್ಟಿ ಅವನ ಕಿರುಕುಳಕ್ಕೆ ಸಿಕ್ಕು ಒದ್ದಾಡುತ್ತಿರುವಾಗ ದತ್ತನ ಪ್ರವೇಶವಾಗುತ್ತದೆ. ಆಮೇಲೆ ಕತೆ ಹಲವು ಊಹಿಸಲಾಗದ ತಿರುವುಗಳನ್ನು ತೆಗೆದುಕೊಳ್ಳುತ್ತಾ ಮುಂದೆ ಸಾಗುತ್ತದೆ.

ದೃಷ್ಟಿಗೆ ತನ್ನ ಸೋದರಿ ಸಿಕ್ಕಳೆ? ವಿಧಿ ದತ್ತ ಮತ್ತು ದೃಷ್ಟಿಯನ್ನು ಒಂದುಮಾಡುವುದೆ? ದತ್ತನನ್ನು ಅವನ ದುಷ್ಟ ಸೋದರಿಯರಿಂದ ದೃಷ್ಟಿ ಕಾಪಾಡಬಲ್ಲಳೆ? ಇಂಥ ಎಲ್ಲ ಪ್ರಶ್ನೆಗಳಿಗೂ ಉತ್ತರ ಬೇಕೆಂದರೆ ನೀವು ‘ದೃಷ್ಟಿಬೊಟ್ಟು’ ಧಾರಾವಾಹಿಯನ್ನು ನೋಡಬೇಕು. ಈ ಹೊಸ ಧಾರಾವಾಹಿಯ ಸೆಪ್ಟೆಂಬರ್ 9ರ ಸಂಜೆ 6:30ಕ್ಕೆ  ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ. ಇನ್ನು ಜಿಯೊ ಸಿನಿಮಾ ಆಪ್​​​ನಲ್ಲಿ ಕೂಡ ‘ದೃಷ್ಟಿಬೊಟ್ಟು’ ಧಾರಾವಾಹಿಯನ್ನು ವೀಕ್ಷಣೆ ಮಾಡಬಹುದು.

ಇದನ್ನೂ ಓದಿ : ಬೆಳಗಾವಿಯವರು ಸಿಎಂ ಆದ್ರೆ ಖುಷಿ – ಸತೀಶ್​ ಜಾರಕಿಹೊಳಿ ಸಿಎಂ ವಿಚಾರಕ್ಕೆ ಲಕ್ಷ್ಮಣ್‌ ಸವದಿ ರಿಯಾಕ್ಷನ್..!

Leave a Comment

DG Ad

RELATED LATEST NEWS

Top Headlines

ಬಿಬಿಎಂಪಿ ವ್ಯಾಪ್ತಿಯಲ್ಲಿ ಗುಂಡಿ ಮುಚ್ಚಲು ಡೆಡ್​ಲೈನ್​ ಕೊಟ್ಟ ಸಿಎಂ ಸಿದ್ದು..!

ಬೆಂಗಳೂರು : ಮುಡಾ ಹಗರಣ ಆರೋಪದ ಅರ್ಜಿ ವಿಚಾರಣೆಯ ನಡುವೆಯೂ ಸಿಎಂ ಸಿದ್ಧರಾಮಯ್ಯ ಅವರು ನಿನ್ನೆ ಬೆಂಗಳೂರು ನಗರದ ರಸ್ತೆ ಗುಂಡಿಗಳ ನಿರ್ಮೂಲನೆ, ರಸ್ತೆ ಅಭಿವೃದ್ಧಿ ಮತ್ತು

Live Cricket

Add Your Heading Text Here