Download Our App

Follow us

Home » ರಾಜಕೀಯ » ಅಕ್ರಮ ಆರೋಪ : ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು..!

ಅಕ್ರಮ ಆರೋಪ : ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು..!

ಬೆಂಗಳೂರು : ಅಕ್ರಮವಾಗಿ ಭೂಮಿ ಪಡೆದ ಆರೋಪ ಸಂಬಂಧ ಪರಿಷತ್​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಸಲೀಂ ಅಹ್ಮದ್ ನೇತೃತ್ವದ ಕಾಂಗ್ರೆಸ್ ಸದಸ್ಯರ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ.

ಸಲೀಂ ಅಹ್ಮದ್​, ರಮೇಶ್​ ಬಾಬು, ಪುಟ್ಟಣ್ಣ ಮತ್ತಿತರರ ನಿಯೋಗ ದೂರು ನೀಡಿ, ಛಲವಾದಿ ನಾರಾಯಣಸ್ವಾಮಿ ಅಧಿಕಾರ ದುರುಪಯೋಗ ಮಾಡಿದ್ದಾರೆ. ವಿಪಕ್ಷ ನಾಯಕನ ಸ್ಥಾನದ ಗಾಂಭೀರ್ಯತೆಗೆ ಧಕ್ಕೆ ತಂದಿದ್ದಾರೆ. ಕೂಡಲೇ MLC ಸ್ಥಾನದಿಂದ ಅವರನ್ನು ವಜಾ ಮಾಡಿ ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್​ ವಿರುದ್ಧ ಹಗರಣದ ಬಾಂಬ್​ ಸಿಡಿಸಿದ್ದ ಛಲವಾದಿಗೆ ತಿರುಗೇಟು ನೀಡಿದ ಕಾಂಗ್ರೆಸ್​​​, 2002ರಿಂದ 2004ರವರೆಗೆ ಕರ್ನಾಟಕ ಹೌಸಿಂಗ್ ಬೋರ್ಡ್ ಮೆಂಬರ್ ಆಗಿದ್ರು. ಬೋರ್ಡ್ ನಿರ್ದೇಶಕರಾಗಿದ್ದ ಛಲವಾದಿ ನಾರಾಯಣಸ್ವಾಮಿ ಆದರ್ಶ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಅಂತಾ ಹೇಳಿ ಭೂಮಿ ಪಡೆದಿದ್ರು. ಈ ವೇಳೆ ಶಿಕ್ಷಣ ಸಂಸ್ಥೆಗೆ 20 ಸಾವಿರ ಮೀಟರ್​ನಷ್ಟು ಭೂಮಿ ಪಡೆದಿದ್ರು ಎಂದಿದ್ದಾರೆ.

ಆನಂತ್ರ ಟೆಲಿ ಕಮ್ಯುನಿಕೇಷನ್ ಸರ್ವೀಸ್ ಕಂಪನಿಗೆ ಮಾರ್ಪಾಡು ಮಾಡಿದ್ರು. ಈಗ ಆ ಜಾಗದಲ್ಲಿ ದಮ್​​ ಬಿರಿಯಾನಿ ಅಂಗಡಿ ನಡೆಸುತ್ತಿದ್ದಾರೆ. ಛಲವಾದಿ ನಾಯಾರಣಸ್ವಾಮಿ ಸಿಎ ಸೈಟ್ ದುರ್ಬಳಕೆ ಮಾಡಿದ್ದಾರೆ ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ನೇತೃತ್ವದಲ್ಲಿ ಆರೋಪ ಮಾಡಿದ್ದಾರೆ.

ಇದನ್ನೂ ಓದಿ : ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರೀತಿಯ ಹೊಸ ಅಧ್ಯಾಯದೊಂದಿಗೆ ನಿಮ್ಮ ಮುಂದೆ ಬರ್ತಿದೆ ‘ನೀನಾದೆ ನಾ’…!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here