ಬೆಂಗಳೂರು : ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಪ್ರಿಯಾಂಕ್ ಖರ್ಗೆ ಕುಟುಂಬದವರು KIADBಯಿಂದ 5 ಎಕರೆ ಜಾಗ ಪಡೆದ ಆರೋಪ ಕೇಳಿಬಂದಿದೆ. ಈ ಪ್ರಕರಣ ಸಂಬಂಧ ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಗವರ್ನರ್ಗೆ ದೂರು ನೀಡಿದ್ದರು. ಇದೀಗ ಗವರ್ನರ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಹಾಗಾಗಿ ಸಚಿವ ಪ್ರಿಯಾಂಕ್ ಖರ್ಗೆಗೂ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.
ಪ್ರಿಯಾಂಕ್ ಖರ್ಗೆ ಪ್ರಭಾವ ಬಳಸಿ ನಿವೇಶನ ಹಂಚಿಕೆ ಮಾಡಿಸಿಕೊಂಡಿದ್ದಾರೆ ಎಂಬ ಆರೋಪವಿದ್ದು, ದೂರಿನ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿವರಣೆ ಕೇಳಿದ್ದಾರೆ. ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಪ್ರಿಯಾಂಕ್ ಖರ್ಗೆ ಕಾನೂನು ಬಾಹಿರವಾಗಿ ಭೂಮಿ ಪಡೆದಿದ್ದಾಗಿ ಗಂಭೀರ ಆರೋಪ ಕೇಳಿಬಂದಿದೆ. ಪರಿಶಿಷ್ಟ ಕೋಟಾದ ಅಡಿಯಲ್ಲಿ ಸಿದ್ದಾರ್ಥ ವಿಹಾರಗೆ ಜಮೀನು ಹಂಚಿಕೆಯಾಗಿದ್ದು, ಮಲ್ಲಿಕಾರ್ಜುನ ಖರ್ಗೆ ಕುಟುಂಬ ನಡೆಸುತ್ತಿರುವ ಸಿದ್ದಾರ್ಥ ವಿಹಾರ ಟ್ರಸ್ಟ್ನಲ್ಲಿ ರಾಹುಲ್ ಖರ್ಗೆ, ಸಂಸದ ರಾಧಾಕೃಷ್ಣ ಕೂಡಾ ಸದಸ್ಯರಾಗಿದ್ದಾರೆ.
ಇದನ್ನೂ ಓದಿ : ತುಮಕೂರಲ್ಲಿ ಹೊತ್ತಿ ಉರಿದ ಪಟಾಕಿ ಮಳಿಗೆ, ಪ್ಲಾಸ್ಟಿಕ್ ಅಂಗಡಿ ಗೋದಾಮು – ಸ್ಫೋಟಕ್ಕೆ ಬೆಚ್ಚಿಬಿದ್ದ ಸ್ಥಳೀಯರು..!