Download Our App

Follow us

Home » ರಾಜಕೀಯ » ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಗೆಲುವು, ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಖಭಂಗ..!

ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಗೆಲುವು, ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಖಭಂಗ..!

ಬೆಂಗಳೂರು : ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ​​  ಪುಟ್ಟಣ್ಣ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಮೊದಲ ಬಾರಿಗೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಹಿನ್ನಡೆಯಾಗಿದ್ದು, ಮೈತ್ರಿ ಅಭ್ಯರ್ಥಿಗೆ ಸೋಲಾಗಿದೆ.

ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದ ಪುಟ್ಟಣ್ಣ, ಅಂತಿಮವಾಗಿ ಜೆಡಿಎಸ್​​ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ್​ ಅವರನ್ನು 1,507 ಮತಗಳ ಅಂತರದಿಂದ ಸೋಲಿಸಿ ಗೆಲುವು ಸಾಧಿಸಿದ್ದಾರೆ.

ಇಂದು ಬೆಂಗಳೂರಿನ ನೃಪತುಂಗ ರಸ್ತೆಯ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತಎಣಿಕೆ ನಡೆದಿದ್ದು, ಕಾಂಗ್ರೆಸ್​ನ ಪುಟ್ಟಣ್ಣ ಒಟ್ಟು 8,260 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್​-ಬಿಜೆಪಿ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ಅವರಿಗೆ ಒಟ್ಟು 6753 ಮತಗಳು ಬಿದ್ದಿವೆ. ಇನ್ನು 1239 ಮತಗಳು ತಿರಸ್ಕೃತಗೊಂಡಿವೆ. ಇದರೊಂದಿಗೆ ಪುಟ್ಟಣ್ಣ, 1507 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ : ಕೋಟಿ ಕೋಟಿ ವಂಚನೆ – ಎನ್ವಿ ಗ್ರೀನ್ ಬಯೋಟೆಕ್ ಕಂಪನಿ ಮಾಲೀಕ ಅಶ್ವಥ್ ಹೆಗ್ಡೆ ವಿರುದ್ಧ ಮತ್ತೊಂದು FIR ದಾಖಲು..!

Leave a Comment

DG Ad

RELATED LATEST NEWS

Top Headlines

ರಮೇಶ್ ರೆಡ್ಡಿ ನಿರ್ಮಾಣದ “ಘುಸ್ಪೈಥಿಯಾ” ಚಿತ್ರ ಆ.9ರಂದು ತೆರೆಗೆ..!

ನಿರ್ಮಾಪಕ ರಮೇಶ್ ರೆಡ್ಡಿ ಅವರು ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರ’, ‘ನಾತಿಚರಾಮಿ’, ‘ಪಡ್ಡೆಹುಲಿ’, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿದ್ದಾರೆ. ಪ್ರಸ್ತುತ ಬಹು ನಿರೀಕ್ಷಿತ “45”

Live Cricket

Add Your Heading Text Here