ಬೆಂಗಳೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನೀವೇಶನ ಹಂಚಿಕೆ ಹಗರಣ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದು, ಬೆಂಗಳೂರಿನಿಂದ ಮೈಸೂರಿನವರೆಗೆ ಇಂದು ಪಾದಯಾತ್ರೆ ಪ್ರಾರಂಭಿಸಿವೆ.
ಈ ಸಂದರ್ಭ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿ, ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗೆಲ್ಲ ಭ್ರಷ್ಟಾಚಾರದ ಆರೋಪ ಬಂದಿದೆ. ಆದರೆ ಮೋದಿ ಮತ್ತು ವಾಜಪೇಯಿ ಸರ್ಕಾರದ ಮೇಲೆ ಒಂದೇ ಒಂದು ಆರೋಪ ಬಂದಿಲ್ಲ. ಇಲ್ಲಿನ ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ಪೂರ್ತಿಯಾಗಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಗುಡುಗಿದ್ದಾರೆ.
ಇನ್ನು ಮುಡಾದಲ್ಲಿ ಅಕ್ರಮವಾಗಿ 14 ನಿವೇಶನಗಳನ್ನ ಪಡೆದು, ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆ ಮಾಡಿದ್ದಾರೆ. ಇದು 100% ಭ್ರಷ್ಟಾಚಾರ ಸರ್ಕಾರ ಅನ್ನೋದು ಮರೆಯಬಾರದು ಎಂದಿದ್ದಾರೆ.
ನೀವು ರಾಜ್ಯಪಾಲರನ್ನ ಪ್ರಶ್ನೆ ಮಾಡ್ತಿರಾ. ಸಿದ್ದರಾಮಯ್ಯ ಅವರೇ ನಿಮ್ಮ ಕೈಯಿಂದಲೇ ಭ್ರಷ್ಟಾಚಾರ ನಡೆದಿದೆ. ರಾಜ್ಯಪಾಲರ ಅಧಿಕಾರ ಇಲ್ಲ ಅನ್ನೋದು ಏನಿದೆ. ಭ್ರಷ್ಟಾಚಾರ ಮುಚ್ಚಿಹಾಕಿಕೊಳ್ಳಲು ಅವರ ಮೇಲೆಯೇ ಬೆದರಿಕೆ ಹಾಕ್ತಿದ್ದೀರಾ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಈ ಭ್ರಷ್ಟಾಚಾರದಲ್ಲಿ ಕೇಂದ್ರ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ. ಆದ್ದರಿಂದಲೇ ಸಿದ್ದರಾಮಯ್ಯ ರಾಜೀನಾಮೆ ಕೇಳಲು ಆಗ್ತಿಲ್ಲ. ಬೆಲ್‌ನಲ್ಲಿ ಇರೋ ನಾಯಕರು ಜೈಲಿಗೆ ಹೋಗುವವರ ರಾಜೀನಾಮೆ ಪಡೆಯಲು ಆಗ್ತಿಲ್ಲ. ಸಿದ್ದರಾಮಯ್ಯ ಅವರೇ ನೀವು ನಿಮ್ಮ ಮನೆಗೆ ಹೋಗ್ತಿದ್ದಿರಾ. ನಿಮ್ಮ ಮೇಲೆ ರೀಡೋ ಹಗರಣ, ವಾಚ್ ಬಗ್ಗೆಯೂ ಮಾತನಾಡಿಲ್ಲ. ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದರೆ ಕಾಂಗ್ರೆಸ್ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ಯಾದಗಿರಿ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಕಿರುಕುಳದಿಂದಲೇ ಸಾವನ್ನಪ್ಪಿದ್ರಾ ಪಿಎಸ್ಐ?- MLA ವಿರುದ್ಧ PSI ಪತ್ನಿ ಆಕ್ರೋಶ..!