ಚನ್ನಪಟ್ಟಣ : ಚನ್ನಪಟ್ಟಣ ಉಪಚುನಾವಣೆ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಹಾಗೂ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡುವಿನ ಪೈಪೋಟಿ ತೀವ್ರಗೊಳ್ಳುತ್ತಿದೆ. ಚನ್ನಪಟ್ಟಣದಲ್ಲಿ ಗೆಲುವು ಸಾಧಿಸಬೇಕು ಎಂದು ಜಿದ್ದಿಗೆ ಬಿದ್ದಿರೋ ಕಾಂಗ್ರೆಸ್ಗೆ ಇದೀಗ ಬಿಗ್ ಶಾಕ್ ಎದುರಾಗಿದೆ.
ಚನ್ನಪಟ್ಟಣದ ಹಳ್ಳಿ ಹಳ್ಳಿಗಳಲ್ಲಿ ಕಾಂಗ್ರೆಸ್ ಶಾಸಕರೊಬ್ಬರು JDS ಪರ ಪ್ರಚಾರ ಮಾಡುತ್ತಿದ್ದಾರೆ. ಡಿಕೆಶಿಗೆ ವಿರುದ್ಧವಾಗಿರುವ ಕಾಂಗ್ರೆಸ್ MLA ನಿಖಿಲ್ ಪರ ಕ್ಯಾಂಪೇನ್ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಯೋಗೇಶ್ವರ್ ಗೆಲ್ಲಬಾರದೆಂದು ಆ ಶಾಸಕರು ಹಠಕ್ಕೆ ಬಿದ್ದಿದ್ದಾರೆ. ಕುಮಾರಸ್ವಾಮಿಗೆ ಹತ್ತಿರವಾಗಿರುವ ಕಾಂಗ್ರೆಸ್ ಶಾಸಕ ನಿಖಿಲ್ ಪರ ಮತ ಚಲಾಯಿಸುವಂತೆ ಹಳ್ಳಿಗಳಲ್ಲಿ ಹಣ ಹಂಚುತ್ತಿರುವ ಆರೋಪ ಕೇಳಿಬಂದಿದೆ.
ಶಾಸಕರ ನಡೆಗೆ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈಗಾಗಲೇ ಕಾರ್ಯಕರ್ತರು ಎರಡು ಮೂರು ಬಾರಿ ಕೆಪಿಸಿಸಿಗೆ ದೂರು ನೀಡಿದ್ದು, ಎಷ್ಟೇ ದೂರು ಕೊಟ್ಟರು ಕೆಪಿಸಿಸಿ ಸ್ಪಂದಿಸುತ್ತಿಲ್ಲ. ಆ ಶಾಸಕ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಇದ್ದು, ತನ್ನದೇ ಎಂಎಲ್ಎ ನಡೆಯಿಂದ ಕಾಂಗ್ರೆಸ್ ಬಿಗ್ ಶಾಕ್ಗೆ ಒಳಗಾಗಿದೆ.
ಇದನ್ನೂ ಓದಿ : ಚನ್ನಪಟ್ಟಣ ಅಖಾಡದಲ್ಲಿ ಝಣ ಝಣ ಕಾಂಚಾಣ ಸದ್ದು.. ಬಹಿರಂಗವಾಗಿ ಹಣ ಹಂಚಿದ್ರಾ ಸಚಿವ ಜಮೀರ್ ಅಹ್ಮದ್?