ಮೈಸೂರು : ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶದ ವಿರುದ್ಧ ಸಿಎಂ ಸಿದ್ದರಾಮಯ್ಯನವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಆದೇಶ ರದ್ದುಗೊಳಿಸುವಂತೆ ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದಕ್ಕೆ ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಆಕ್ರೋಶ ಹೊರಹಾಕಿದ್ದು, ಇಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೈ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸಿಎಂ ಸಿದ್ದು ತವರಿನಲ್ಲೂ ಕಾಂಗ್ರೆಸ್ ಕಿಚ್ಚು ಭುಗಿಲೆದ್ದಿದೆ. ರಾಜ್ಯಪಾಲರ ನಿರ್ಧಾರ ಖಂಡಿಸಿ ಮೈಸೂರಿನಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಟಿ.ನರಸೀಪುರ ಬಂದ್ ಮಾಡಿ ಕಾಂಗ್ರೆಸ್ ಕಾರ್ಯಕರ್ತರು ಹೋರಾಟ ಮುಂದುವರೆಸಿದ್ದಾರೆ.
ಬೆಳಿಗ್ಗೆಯಿಂದಲೇ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳು ಬಂದ್ ಮಾಡಲಾಗಿದ್ದು, ಬಸ್ ನಿಲ್ದಾಣ ರಸ್ತೆ ತಡೆದು ಪ್ರತಿಭಟನೆ ಮಾಡಲು ಪ್ರಯತ್ನಿಸಿದ್ದಾರೆ. ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಿ – ಬಿಜೆಪಿ ಮುಖಂಡ ಎನ್.ಆರ್ ರಮೇಶ್ ಲೋಕಾಯುಕ್ತಕ್ಕೆ ಮನವಿ..!