Download Our App

Follow us

Home » ರಾಜಕೀಯ » ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ಕಸರತ್ತು – ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ದೆಹಲಿಗೆ ಪ್ರಯಾಣ..!

ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ಕಸರತ್ತು – ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ದೆಹಲಿಗೆ ಪ್ರಯಾಣ..!

ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಾಂಕ ನಿಗದಿ ಆದ ಬೆನ್ನಲ್ಲೇ ರಾಜಕೀಯ ಪಕ್ಷಗಳಿಂದ ಪ್ರಚಾರ ಭರದಿಂದ ಸಾಗುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆ ಇನ್ನೂ ಕಗ್ಗಂಟಾಗಿ ಉಳಿದಿದೆ. ಮೊದಲ ಹಂತದಲ್ಲಿ 95 ಅಭ್ಯರ್ಥಿಗಳನ್ನ ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ.

ಇದಕ್ಕಾಗಿ ದೆಹಲಿಯಲ್ಲಿ ಸಭೆಗಳ ಮೇಲೆ ಸಭೆ ನಡೆಸುತ್ತಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಮಾಲೋಚನಾ ಸಭೆಗಳು ನಡೆಯುತ್ತಿದ್ದು, ಅದರಲ್ಲಿ ಭಾಗವಹಿಸುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇಂದು ಬೆಳಗ್ಗೆ 10 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಭೆ ನಡೆಸಲಿರುವ ಕಾಂಗ್ರೆಸ್​ ನಾಯಕರು, ಅಭ್ಯರ್ಥಿಗಳ 2ನೇ​ ಲಿಸ್ಟ್​ ರಿಲೀಸ್​ ವಿಚಾರವಾಗಿ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆಸಲಿದ್ದಾರೆ ಎಂದು ಹೇಳಲಾಗಿದೆ. ಹಾಗೂ ಬಿಜೆಪಿಯ ಅಸಮಾಧಾನಿತರ ಸೆಳೆದು ಕಾಂಗ್ರೆಸ್​ ಟಿಕೆಟ್​ ಕೊಡುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.

21 ಕ್ಷೇತ್ರಗಳ ಬಗ್ಗೆ ಯಾರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ಈಗಾಗಲೇ ಬಹುತೇಕ ನಿರ್ಧಾರ ಮಾಡಿರುವ ರಾಜ್ಯ ನಾಯಕರು, ಇಂದು ಸಿಂಗಲ್ ನೇಮ್ ಇರುವ ಕ್ಷೇತ್ರಗಳ ಅಭ್ಯರ್ಥಿಯ ಹೆಸರನ್ನ ಹೈಕಮಾಂಡ ಮುಂದೆ ಇಡಲಿದ್ದಾರೆ. 12 ರಿಂದ 15 ಕ್ಷೇತ್ರಗಳಲ್ಲಿ ಒಂದೇ ಹೆಸರನ್ನ ಒಮ್ಮತದಿಂದ ನಿರ್ಧರಿಸಿದ್ದು, ಸಿಇಸಿ ಸಭೆಯಲ್ಲಿ ಅಂತಿಮಗೊಳ್ಳಲಿವೆ. ನಂತರ ಉಳಿದ ಕೆಲ ಗೊಂದಲ ಕ್ಷೇತ್ರಗಳನ್ನು ಮತ್ತೊಂದು ಸುತ್ತಿನ ಸಭೆಯಲ್ಲಿ ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪ್ರಮುಖವಾಗಿ ಬೆಳಗಾವಿ ಕೋಲಾರ, ಚಿಕ್ಕೋಡಿ, ಬಳ್ಳಾರಿ ಮೈಸೂರು ಸೇರಿ ಪ್ರಮುಖ ಕ್ಷೇತ್ರಗಳ ಬಗ್ಗೆ ಚರ್ಚೆಯಾಗಲಿದೆ.

ನಾಳೆಯೇ ಕಾಂಗ್ರೆಸ್​ನ ಎರಡನೇ ಲಿಸ್ಟ್​ ಘೋಷಣೆ..? ಇಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆಯ ನಂತರ ನಾಳೆ ರಾಜ್ಯದ ಎರಡನೇ ಕಾಂಗ್ರೆಸ್ ಪಟ್ಟಿ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆಯಿದ್ದು, ಬಳಿಕ ಯಾರೆಲ್ಲಾ ಯಾವ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬೀಳುವ‌ ಸಾದ್ಯತೆ ಇದೆ.

ಇದನ್ನೂ ಓದಿ : ಕಾಂಗ್ರೆಸ್​​ಗೆ ಕರ್ನಾಟಕ ಒಂದು ರೀತಿ ATM ಆಗಿದೆ : ಪ್ರಧಾನಿ ಮೋದಿ ವಾಗ್ದಾಳಿ..!

Leave a Comment

RELATED LATEST NEWS

Top Headlines

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ

Live Cricket

Add Your Heading Text Here