Download Our App

Follow us

Home » ರಾಜಕೀಯ » ಇಂದು ದೆಹಲಿಯಲ್ಲಿ ಕಾಂಗ್ರೆಸ್​ನ ಕಾರ್ಯಕಾರಿ ಸಮಿತಿ ಸಭೆ..!

ಇಂದು ದೆಹಲಿಯಲ್ಲಿ ಕಾಂಗ್ರೆಸ್​ನ ಕಾರ್ಯಕಾರಿ ಸಮಿತಿ ಸಭೆ..!

ನವದೆಹಲಿ : ದೆಹಲಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ AICC ಪ್ರಧಾನ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸಭೆಯ ನಂತರ ಒಂದು ಗಂಟೆಗೆ ನಾಯಕರು ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಕಾರ್ಯಕಾರಿ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ಸೇರಿ ಹಲವು ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇನ್ನು ಲೋಕಸಭಾ ಚುನಾವಣೆ ಫಲಿತಾಂಶ ಪರಾಮರ್ಶೆ ಮಾಡುವ ಸಾಧ್ಯತೆಯಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​​, ಬಿ.ಕೆ.ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಭಾಗಿಯಾಗಲಿದ್ದಾರೆ.

ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 99 ಸ್ಥಾನ ಗೆದ್ದಿದೆ. 10 ವರ್ಷಗಳ ನಂತರ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನ ಸ್ಥಾನ ಪಡೆಯುತ್ತಿದೆ.  ಇನ್ನು ಇಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ ನಡೆಯಲಿದೆ ಮೂಲಗಳಿಂದ ತಿಳಿದು ಬಂದಿದೆ. ಈ ಸಭೆಯನ್ನು ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆಸಲಾಗುವುದು. ಸಂಸದೀಯ ಪಕ್ಷದ ಸಭೆಯ ನಂತರ ಕಾಂಗ್ರೆಸ್ ನಾಯಕರಿಗೆ ಔತಣಕೂಟ ಏರ್ಪಡಿಸಲಾಗಿದೆ.

ಇದನ್ನೂ ಓದಿ : ಮನೋರಂಜನೆಯ ಮಹಾಪೂರವನ್ನೇ ಹರಿಸಲು ಜೂ. 21ಕ್ಕೆ ತೆರೆಗೆ ಬರ್ತಿದೆ “ರಮೇಶ್ ಸುರೇಶ್”..!

 

 

 

 

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here