ದೆಹಲಿ : ಸಂವಿಧಾನದ ಪ್ರತಿ ಹಿಡಿದು ಹೋದ ಮಾತ್ರಕ್ಕೆ ಜನ ಕಾಂಗ್ರೆಸ್ ಪಕ್ಷವನ್ನು ನಂಬಲಾರರು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ನಾಯಕರಿಗೆ ಚಾಟಿ ಬೀಸಿದ್ದಾರೆ.
ದೆಹಲಿಯ ಸಂಸತ್ ಭವನದಲ್ಲಿ ಇಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪುಣ್ಯಸ್ಮರಣೆ ಪ್ರಯುಕ್ತ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ದೇಶದ ಸಂವಿಧಾನ ಮತ್ತು ಸಂವಿಧಾನ ಶಿಲ್ಪಿಗೆ ಹೇಗೆ ಅಪಮಾನ ಮಾಡಿದ್ದಾರೆ ಎಂಬುದು ಜನಕ್ಕೆ ಗೊತ್ತಿದೆ. ಹಾಗಾಗಿ ಸಂವಿಧಾನದ ಪ್ರತಿ ಹಿಡಿದು ಹೋದಕ್ಷಣ ಜನ ಮರುಳಾಗಲ್ಲ ಎಂದು ಹೇಳಿದರು.
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಸಂವಿಧಾನಕ್ಕೆ ಹೇಗೆ ಅಪಮಾನ ಮಾಡಿದರು. ಅಂಬೇಡ್ಕರ್ ಅವರನ್ನು ಎಷ್ಟು ಅಪಮಾನದಿಂದ ನಡೆಸಿಕೊಂಡರು ಎಂಬುದು ಜನಕ್ಕೆ ಗೊತ್ತಿದೆ ಎಂದಿದ್ದಾರೆ.
ಇನ್ನು ದೇಶದ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಜನತೆ ತಿರಸ್ಕರಿಸಿದ್ದಾರೆ ಎಂದ ಸಚಿವ ಜೋಶಿ, ಕಾಂಗ್ರೆಸ್ ನಾಯಕರಿಗೆ ಸಂವಿಧಾನದ ಮೇಲೆ ಅಷ್ಟು ಗೌರವವಿದ್ದರೆ ಸಂಸತ್ ಅಧಿವೇಶನಕ್ಕೆ ಸಹಕಾರ ನೀಡಲಿ ಮತ್ತು ಸದನವನ್ನು ಸುಗಮಗೊಳಿಸಲಿ ಎಂದು ಹೇಳಿದರು.
ಇದನ್ನೂ ಓದಿ : ನಾಯಿ ಮರಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಚಾಲಕ – ದೃಶ್ಯ ಸಿಸಿಟಿವಿಯಲ್ಲಿ ಸೆರೆ..!