ಚಿತ್ರದುರ್ಗ : ಶಾರ್ಟ್ ಸರ್ಕ್ಯೂಟ್ನಿಂದ ಆಯಿಲ್ ತುಂಬಿದ್ದ ಕಂಟೇನರ್ ಹೊತ್ತಿ ಉರಿದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ಆಯಿಲ್ ತುಂಬಿದ ಕಂಟೇನರ್ ತೆರಳುತ್ತಿರುವಾಗ ಬೆಂಕಿ ಕಾಣಿಸಿಕೊಂಡಿದೆ.
ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನರ್ ತಕ್ಷಣ ಕಂಟೇನರ್ನಿಂದ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯ ಪರಿಣಾಮ ಟ್ಯಾಂಕರ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಲಾರಿ ಹೊತ್ತಿ ಉರಿದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ : ಕೆಲವರು ಸಿಎಂ ಆಗಲು 1000 ಕೋಟಿ ರೆಡಿ ಮಾಡಿದ್ದಾರೆ – ಶಾಸಕ ಯತ್ನಾಳ್ ಬಾಂಬ್..!
Post Views: 101