Download Our App

Follow us

Home » ರಾಜಕೀಯ » ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ – ಗೃಹ ಸಚಿವ ಪರಮೇಶ್ವರ್!

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ – ಗೃಹ ಸಚಿವ ಪರಮೇಶ್ವರ್!

ಬೆಂಗಳೂರು : ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಇದರಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ತಳುಕು ಹಾಕಿಕೊಂಡಿದ್ದು, ವಿರೋಧ ಪಕ್ಷ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ಕೊಡುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಾ.ಜಿ ಪರಮೇಶ್ವರ್ ಅವರು, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಯವರ ಮೇಲೆ ಬಿಜೆಪಿ ಆರೋಪ ಮಾಡಿದೆ. ಇದನ್ನು ಸಿಐಡಿಗೆ ಕೊಟ್ಟಿದ್ದೇವೆ. ಇಂದು ಈ ಬಗ್ಗೆ ಅಧಿಕೃತವಾಗಿ ಆದೇಶ ಹೊರಡಿಸಲಾಗುವುದು. ಸಚಿವರ ಮೇಲೆ ಅನಾವಶ್ಯಕವಾಗಿ ಆರೋಪ ಮಾಡುತ್ತಿರುವುದು ಸರ್ಕಾರಕ್ಕೆ ಸರಿ ಬರಲ್ಲ. ಜೀವ ಕಳೆದುಕೊಂಡವರು ಬರೆದಿರುವ ಪತ್ರದಲ್ಲಿ ಸಚಿವರ ಹೆಸರು ಕೂಡ ಇಲ್ಲ. ಆದರೂ ಸಚಿವರ ಹೆಸರನ್ನು ಬಳಸಿಕೊಂಡು ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಪ್ರಕರಣದ ಸತ್ಯಾಸತ್ಯತೆ ಏನೆಂದು ತಿಳಿಯಲು ನಾವು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಚರ್ಚೆ ಮಾಡಿ ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದೇವೆ. ಬಿಜೆಪಿ ಹೇಳಿದಂತೆ ಎಲ್ಲ ಕೇಸ್​ ಅನ್ನು ತೆಗೆದುಕೊಂಡು ಹೋಗಿ ಸಿಬಿಐಗೆ ಕೊಡುವುದಕ್ಕೆ ಆಗಲ್ಲ. ಎಲ್ಲ ರಾಜಕೀಯ ಮಾಡೋಕೆ ಹೋಗಬಾರದು. ಸಿಐಡಿ ಸಮರ್ಥವಾಗಿದೆ. ಈಗಾಗಲೇ ಅನೇಕ ಕೇಸ್​ಗಳು ಪರಿಹರಿಸಿದೆ. ಪ್ರಕರಣ ಸಂಬಂಧ ಪ್ರಿಯಾಂಕ್ ಖರ್ಗೆ ರಾಜೀನಾಮೆ ‌ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ಇದನ್ನೂ ಓದಿ : ನ್ಯೂ ಇಯರ್​ಗೆ ಗುಡ್​ ನ್ಯೂಸ್​ – ಜೋಗ್​ ಫಾಲ್ಸ್​ ವೀಕ್ಷಣೆಗೆ ಗ್ರೀನ್ ಸಿಗ್ನಲ್!

Leave a Comment

DG Ad

RELATED LATEST NEWS

Top Headlines

ಕರ್ನಾಟಕದಲ್ಲಿಂದು ಐತಿಹಾಸಿಕ ಬೆಳವಣಿಗೆ – ಮುಂಡಗಾರು ಲತಾ ಸೇರಿ 6 ನಕ್ಸಲರು ಶರಣಾಗತಿ.. ಪ್ರಕ್ರಿಯೆ ಹೇಗಿರಲಿದೆ?

ಚಿಕ್ಕಮಗಳೂರು : ಇಂದು (ಜ.08) ಕರ್ನಾಟಕದ ಇತಿಹಾಸದಲ್ಲೇ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನವಾಗಲಿದೆ. ಕರ್ನಾಟಕ, ಕೇರಳ, ತಮಿಳುನಾಡು ಮೂಲದ 6 ಮೋಸ್ಟ್‌ ವಾಂಟೆಡ್‌ ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ

Live Cricket

Add Your Heading Text Here