ಕಲಬುರಗಿ : ಬೀದರ್ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪಾತ್ರವಿದೆ ಎಂದು ವಿರೋಧ ಪಕ್ಷಗಳು ಗಂಭೀರ ಆರೋಪ ಮಾಡಿದ್ದು, ಇದು ರಾಜ್ಯ ರಾಜಕೀಯದಲ್ಲಿ ತೀವ್ರ ವಿವಾದ ಸೃಷ್ಟಿಸಿದೆ.
ಈ ಹೊತ್ತಲ್ಲೇ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಇಂದು ಸಚಿವರ ತವರು ಜಿಲ್ಲೆ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆ ಹಾಕಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಜಗತ್ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದ್ದು, ಅಲ್ಲಿಂದ ನೇರವಾಗಿ ಡಿಸಿ ಕಚೇರಿ ಮಾರ್ಗವಾಗಿ ಪ್ರಿಯಾಂಕ್ ನಿವಾಸ ಕಡೆಗೆ ಬಿಜೆಪಿ ನಾಯಕರು ಪ್ರತಿಭಟನೆಯೊಂದಿಗೆ ಸಾಗಲಿದ್ದಾರೆ. ಬಳಿಕ ಐವಾನ್-ಇ-ಶಾಹಿ ಬಳಿಯಿರೋ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ.
ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿಯ ಘಟಾನುಘಟಿ ನಾಯಕರು ಭಾಗಿಯಾಗಲಿದ್ದು, ವಿಪಕ್ಷ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ, ಎಂಎಲ್‌ಸಿ ರವಿಕುಮಾರ್, ಮಾಜಿ ಶಾಸಕ ಪಿ.ರಾಜೀವ್ ಸೇರಿದಂತೆ ಅನೇಕ ನಾಯಕರು ಭಾಗಿಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ : ಪ್ರಯಾಣಿಕರಿಗೆ ಬಿಗ್ ಶಾಕ್.. ನಾಳೆಯಿಂದಲೇ KSRTC ಟಿಕೆಟ್ ದರ ಏರಿಕೆ – ನಿಮ್ಮ ಊರಿಗೆ ಎಷ್ಟು ರೇಟ್?