ಬೆಳಗಾವಿ : ಸವದತ್ತಿ ಯಲ್ಲಮ್ಮ ಕ್ಷೇತ್ರದ ಹೋಟೆಲ್ನಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿರುವ ಘಟನೆ ನಡೆದಿದೆ. ಘಟನೆಯ ಪರಿಣಾಮ ದೇವಿ ದರ್ಶನಕ್ಕೆ ಬಂದಿದ್ದ ಯಾದಗಿರಿಯ ಐವರು, ಬೆಂಗಳೂರಿನ ಮೂವರು ಭಕ್ತರಿಗೆ ಗಾಯವಾಗಿದೆ.
ಸವದತ್ತಿ ಪಟ್ಟಣದ ಹೋಟೆಲ್ ಒಂದರಲ್ಲಿ ಹೋಳಿಗೆ ಮಾಡಲು ಕುಕ್ಕರ್‌ನಲ್ಲಿ ಬೇಳೆ ಬೇಯಿಸುತ್ತಿದ್ದರು. ಈ ವೇಳೆ ಕುಕ್ಕರ್ ಬ್ಲಾಸ್ಟ್ ಆಗಿ ಹೋಟೆಲ್‌ಗೆ ಬೆಂಕಿ ವ್ಯಾಪಿಸಿದೆ. ಘಟನೆಯ ಪರಿಣಾಮ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡವರನ್ನು ಹುಬ್ಬಳ್ಳಿ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ಆ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯ ಸಂಬಂಧ ಬೆಳಗಾವಿ ಜಿಲ್ಲೆ ಸವದತ್ತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ : ತುಂಗಭದ್ರಾ ಡ್ಯಾಂ ವೀಕ್ಷಣೆ ಮಾಡಿದ ಸಿಎಂ ಸಿದ್ದರಾಮಯ್ಯ..!
Post Views: 319