Download Our App

Follow us

Home » ಅಪರಾಧ » ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಭ್ರಷ್ಟಾಚಾರ ಕೇಸ್​ : ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಸಸ್ಪೆಂಡ್​​..!

ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಭ್ರಷ್ಟಾಚಾರ ಕೇಸ್​ : ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಸಸ್ಪೆಂಡ್​​..!

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಭ್ರಷ್ಟಾಚಾರ ಕೇಸ್​ ಪ್ರಕರಣ ಸಂಬಂಧಿಸಿದಂತೆ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಸಸ್ಪೆಂಡ್​​ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ MD ಪದ್ಮನಾಭ ಅವರನ್ನು ಅಮಾನತುಗೊಳಿಸಲಾಗಿದೆ. ಈಗಾಗಲೇ ಭ್ರಷ್ಟಾಚಾರ ಪ್ರಕರಣವನ್ನು ರಾಜ್ಯ ಸರ್ಕಾರ  CID ವಹಿಸಿತ್ತು. ಶಿವಮೊಗ್ಗ ಮತ್ತು ಬೆಂಗಳೂರು ಎರಡು CID ಅಧಿಕಾರಿಗಳು ಪ್ರಕರಣವನ್ನು ತನಿಖೆ ಮಾಡುತ್ತಿದ್ದು, ನಿಗಮದ ಬಹುಕೋಟಿ ಗೋಲ್ಮಾಲ್ ಬಗೆದಷ್ಟೂ ಬಯಲಾಗ್ತಿದೆ.​​

ಚಂದ್ರಶೇಖರನ್​ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಡೆತ್​​ನೋಟ್​​​ ಆಧರಿಸಿ ಹಗರಣದ ಬಗ್ಗೆ ಸರ್ಕಾರ ತನಿಖೆ ತೀವ್ರಗೊಳಿತ್ತು. ಈ ತನಿಖೆಯಲ್ಲಿ ಹಗರಣದ ಬಹುಕೋಟಿ ಗೋಲ್ಮಾಲ್ ತಿಳಿದು ಬಂದಿದ್ದು, ನಕಲಿ ದಾಖಲೆ ಸೃಷ್ಟಿಸಿ ಹಣ ವರ್ಗಾಯಿಸಿ ದೊಡ್ಡ ನಷ್ಟ ಮಾಡಿರೋ ಆರೋಪ ವ್ಯಕ್ತವಾಗಿದೆ. ಈ ಸಂಬಂಧ ಈಗಾಗಲೇ ಬ್ಯಾಂಕ್​​ನ 6 ಮಂದಿ ಅಧಿಕಾರಿಗಳ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಇದನ್ನೂ ಓದಿ : ಮೇ. 31 ರವರೆಗೆ ಭವಾನಿ ರೇವಣ್ಣಗೆ ಟೆನ್ಷನ್ : ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್​..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here