Download Our App

Follow us

Home » ರಾಜ್ಯ » ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭ : ಸಿಎಂ ಬಜೆಟ್‌ನಲ್ಲಿ ಬೆಂಗಳೂರಿನ ನಿರೀಕ್ಷೆಗಳೇನು?

ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭ : ಸಿಎಂ ಬಜೆಟ್‌ನಲ್ಲಿ ಬೆಂಗಳೂರಿನ ನಿರೀಕ್ಷೆಗಳೇನು?

ಬೆಂಗಳೂರು : ರಾಜ್ಯ ಬಜೆಟ್ 2024-25ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯನವರು ಇಂದು ಬೆಳಗ್ಗೆ 10:15ಕ್ಕೆ ಬಜೆಟ್ ಮಂಡನೆ ಮಾಡಲಿದ್ದಾರೆ. ಸಿದ್ದರಾಮಯ್ಯ ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದ್ದು, ಈ ಬಾರಿ 3.80 ಲಕ್ಷ ಕೋಟಿ ಬಜೆಟ್​ ಮಂಡಿಸಲಿದ್ದಾರೆ. ತೆರಿಗೆ ಹೊರೆ ಇಲ್ಲದಂತೆ ಗ್ಯಾರಂಟಿಯೇತರ ಯೋಜನೆಗಳಿಗೆ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಸಾಧ್ಯತೆಯಿದೆ.

ಸಿಎಂ ಮಂಡಿಸಲಿರುವ ಈ ಬಜೆಟ್ ಮೇಲೆ ಹಲವಾರು ನಿರೀಕ್ಷೆಗಳಿದ್ದು, ಯಾರಿಗೆಲ್ಲಾ ಬಂಪರ್ ಗಿಫ್ಟ್ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ. ಕರ್ನಾಟಕದ ಮಟ್ಟಿಗೆ ಇದೊಂದು ಹೊಸ ದಾಖಲೆಯಾಗಿದೆ. ಲೋಕಸಭೆ ಚುನಾವಣೆಗೆ ಹೊತ್ತಲ್ಲೇ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಗಳಿವೆ.

ಕಳೆದ ಬಾರಿ 3 ಲಕ್ಷದ 27 ಸಾವಿರ ಕೋಟಿ ಗಾತ್ರದ ಬಜೆಟ್​ ಮಂಡನೆ ಮಾಡಿದ್ದು, ಈ ವರ್ಷ 3.80 ಲಕ್ಷ ಕೋಟಿಗೂ ಹೆಚ್ಚು ಗಾತ್ರದ ಬಜೆಟ್​ ಮಂಡನೆಯಾಗಲಿದೆ. ಹಾಗಾಗಿ ಬೆಂಗಳೂರಿಗೆ ಭರಪೂರ ಅನುದಾನದ ನಿರೀಕ್ಷೆಯಿದ್ದು, ಲೋಕಸಭಾ ಚುನಾವಣಾ ಹೊತ್ತಲ್ಲಿ ಬಂಪರ್ ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ.

ಬೆಂಗಳೂರಿಗೆ ಸಿಗುತ್ತಾ 45,000 ಕೋಟಿ..?

  • ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಹೊಸ ಯೋಜನೆ
  • ಬ್ರಾಂಡ್ ಬೆಂಗಳೂರುಗೆ 45,000 ಕೋಟಿ ಅನುದಾನ ನಿರೀಕ್ಷೆ
  • ಬೆಂಗಳೂರು ಟನಲ್ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಹಣ ಮೀಸಲು
  • ನಮ್ಮ ಮೆಟ್ರೋಗೆ 30,000 ಕೋಟಿ ನೀಡುವ ಸಾಧ್ಯತೆ..
  • ಬೆಂಗಳೂರು ಅಥವಾ ಕಲಬುರಗಿಯಲ್ಲಿ ವಚನ ಮಂಟಪ ನಿರ್ಮಾಣ
  • ನಮ್ಮ ಮೆಟ್ರೋದ 3ನೇ ಹಂತದ ವಿಸ್ತರಣೆಗಾಗಿ 1000 ಕೋಟಿ
  • ಜೆಪಿ ನಗರ 4ನೇ ಹಂತ-ಕೆಂಪಾಪು, ಹೊಸಹಳ್ಳಿ-ಕಡಬಗೆರೆ ಮಾರ್ಗ ನಿರ್ಮಾಣ
  • ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು, ಒಳಚರಂಡಿ ವ್ಯವಸ್ಥೆ

ಇದನ್ನೂ ಓದಿ : ಇಂದು ದಾಖಲೆಯ ಬಜೆಟ್ ಮಂಡಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here