ಬೆಂಗಳೂರು : ಬಿಜೆಪಿ ವಿರುದ್ದ ಅವಹೇಳನಕಾರಿ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ 42 ನೇ ACMM ಕೋರ್ಟ್ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿವಕುಮಾರ್ಗೆ ಬೇಲ್ ಮಂಜೂರು ಮಾಡಿದೆ.
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾಹೀರಾತು ಮೂಲಕ ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಸಿಎಂ ಹುದ್ದೆಗಾಗಿ 2500 ಕೋಟಿ, ಮಂತ್ರಿ ಸ್ಥಾನಕ್ಕಾಗಿ 500 ಕೋಟಿ ರೂಪಾಯಿ ಹಣವನ್ನು ಬಿಜೆಪಿ ಹೈಕಮಾಂಡ್ಗೆ ನೀಡಿ ರಾಜ್ಯ ಬಿಜೆಪಿ ನಾಯಕರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇದರೊಂದಿಗೆ ಶೇ 40 ರಷ್ಟು ಸೇರಿದಂತೆ ವಿವಿಧ ಇಲಾಖೆಗಳ ಕೆಲಸ ಕಾರ್ಯಗಳಲ್ಲಿ ಕಮೀಷನ್ ಡೀಲ್ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು.
2023ರ ಮೇ 5ರಂದು ಜಾಹೀರಾತು ಪ್ರಕಟ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿಯ ಕೇಶವಪ್ರಸಾದ್, ಕಾಂಗ್ರೆಸ್ ನಾಯಕರ ವಿರುದ್ದ ಮಾನನಷ್ಟ ಮೊಕದ್ದಮೆ, ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿಯನ್ನು ಪ್ರತಿವಾದಿಯಾಗಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಕೋರ್ಟ್ ಸೂಚನೆಯಂತೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಇಂದು ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಖುದ್ದು
ಹಾಜರಾದ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೆ ರಾಹುಲ್ ಗಾಂಧಿ ಹಾಜರಾಗದ ಹಿನ್ನಲೆ ಕೋರ್ಟ್ ಖುದ್ದು ಹಾಜರಾಗಲು ಸೂಚನೆ ನೀಡಿದ್ದು, ಹಾಜರಾಗದೇ ಇದ್ರೆ ವಾರೆಂಟ್ ಹೊರಡಿಸೋ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ : SITಯಿಂದ ಇಬ್ಬರು ಅಧಿಕಾರಿಗಳ ಅರೆಸ್ಟ್..!