Download Our App

Follow us

Home » ರಾಜಕೀಯ » ಪಾಕ್ ಪರ ಘೋಷಣೆ ಕೇಸ್ – ಮಹಮ್ಮದ್ ಶಫಿ ನಾಶಿಪುಡಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್..!

ಪಾಕ್ ಪರ ಘೋಷಣೆ ಕೇಸ್ – ಮಹಮ್ಮದ್ ಶಫಿ ನಾಶಿಪುಡಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್..!

ಬೆಂಗಳೂರು : ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ಶಫಿ ನಾಶಿಪುಡಿಗೆ 14ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 39ನೇ ACMM ಕೋರ್ಟ್ ಆದೇಶಿಸಿದೆ. ಪ್ರಕರಣ ಸಂಬಂಧ  ಬಂಧಿತನಾಗಿದ್ದ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಹಮ್ಮದ್ ಶಫಿ ನಾಶಿಪುಡಿಯನ್ನು ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ಈ ಪ್ರಕರಣ ಸಂಬಂಧ ಇದೀಗ ಬೆಂಗಳೂರಿನ 39ನೇ ಎಸಿಎಂಎಂ ನ್ಯಾಯಾಲಯ ಆರೋಪಿ ನಾಶಿಪುಡಿಗೆ ಎರಡು ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಪ್ರಕರಣದ ಮೂವರು ಆರೋಪಿಗಳ ಪೈಕಿ ನಿನ್ನೆ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿತ್ತು.

ಏನಿದು ಪ್ರಕರಣ..?
ಕರ್ನಾಟಕದಿಂದ ರಾಜ್ಯಸಭೆಗೆ ಖಾಲಿಯಾಗಿದ್ದ 4 ಸ್ಥಾನಗಳಿಗೆ ಫೆಬ್ರವರಿ 27 ರಂದು ವಿಧಾನಸೌಧದಲ್ಲಿ ಚುನಾವಣೆ ನಡೆದಿತ್ತು. ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಇಬ್ಬರು, ಕಾಂಗ್ರೆಸ್​ನಿಂದ ಮೂವರು ರಾಜ್ಯಸಭಾ ಚುನಾವಣಾ ಕಣದಲ್ಲಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್​ನ ಮೂವರು ಅಭ್ಯರ್ಥಿಗಳು  ಗೆಲುವು ಸಾಧಿಸಿದ್ದರು. ಕಾಂಗ್ರೆಸ್​​ನ ನಾಸೀರ್ ಹುಸೇನ್ ರಾಜ್ಯಸಭೆಗೆ ಆಯ್ಕೆ ಬೆನ್ನಲ್ಲೆ ವಿಧಾನಸೌಧದಲ್ಲಿ ಸೆಲೆಬ್ರೇಷನ್ ನಡೆದಿತ್ತು. ಈ ​ ವೇಳೆ ‘ಪಾಕಿಸ್ತಾನ್​ ಜಿಂದಾಬಾದ್’​ ಎಂಬ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರಿಂದ ತೀವ್ರ ಟೀಕೆಗೆ ಒಳಗಾದ ರಾಜ್ಯ ಸರ್ಕಾರ, ವಿಡಿಯೋ ಕ್ಲಿಪ್ ಅನ್ನು ಎಫ್​ಎಸ್​ಎಲ್ ವರದಿಗೆ ಕಳುಹಿಸಿತ್ತು. ಇದೀಗ ಎಫ್​ಎಸ್​ಎಲ್ ವರದಿ ಆಧಾರದ ಮೇಲೆ ಮೊಹಮ್ಮದ್ ಶಫಿ ನಾಶಿಪುಡಿ, ಮುನ್ನಾವರ್ ಅಹಮ್ಮದ್, ಮೊಹಮ್ಮದ್ ಇಲ್ತಾಜ್ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಈ ಮೂವರು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಹೆಚ್ಚುವರಿ ವಿಚಾರಣೆಗಾಗಿ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು.

ಇದನ್ನೂ ಓದಿ : ನೆಲಮಂಗಲ : ಬೈಕ್​ನಲ್ಲಿ ವೇಗವಾಗಿ ಬಂದು ವಿದ್ಯುತ್​​​ ಕಂಬಕ್ಕೆ ಡಿಕ್ಕಿ.. ಸವಾರ ಸಾವು, ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here