Download Our App

Follow us

Home » ರಾಜ್ಯ » ಕೋರ್ಟ್​ನ ಅಮೂಲ್ಯ ಸಮಯವನ್ನು ಉಳಿಸಲು ಮತ್ತೊಂದು ಹೆಜ್ಜೆ ಇಟ್ಟ ನ್ಯಾ. ಎಂ. ನಾಗಪ್ರಸನ್ನ..!

ಕೋರ್ಟ್​ನ ಅಮೂಲ್ಯ ಸಮಯವನ್ನು ಉಳಿಸಲು ಮತ್ತೊಂದು ಹೆಜ್ಜೆ ಇಟ್ಟ ನ್ಯಾ. ಎಂ. ನಾಗಪ್ರಸನ್ನ..!

ಬೆಂಗಳೂರು : ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಪ್ರಕರಣಗಳ ತ್ವರಿತ ವಿಲೇವಾರಿಗೆ ಹೆಸರುವಾಸಿಯಾಗಿದ್ದಾರೆ. ಇದೀಗ ತೆರೆದ ನ್ಯಾಯಾಲಯದ ಅಮೂಲ್ಯ ಸಮಯವನ್ನು ಉಳಿಸುವ ನಿಟ್ಟಿನಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ.

ಪ್ರಕರಣಗಳಲ್ಲಿ ದೀರ್ಘವಾದ ತೀರ್ಪುಗಳ ಬಗ್ಗೆ ತೆರೆದ ನ್ಯಾಯಾಲಯದಲ್ಲಿ ಉಕ್ತ ಲೇಖನ ನೀಡದೇ ಇರುವ ಬಗ್ಗೆ ತೀರ್ಮಾನ ಕೈಗೊಂಡಿದ್ದೇನೆ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ನಿನ್ನೆ ಮುಕ್ತ ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ಮೌಖಿಕವಾಗಿ ಪ್ರಕಟಿಸಿದರು. ಮುಕ್ತ ನ್ಯಾಯಾಲಯದಲ್ಲಿ ದೀರ್ಘವಾದ ತೀರ್ಪುಗಳಿಗೆ ಉಕ್ತಲೇಖನ ನೀಡುವುದನ್ನು ತಪ್ಪಿಸಿ ಎಂದು ಸುಪ್ರೀಂ ಕೋರ್ಟ್ ನೀಡಿರುವ ಸಲಹೆಯ ಪಾಲನೆಗೆ ಈ ನಿರ್ಧಾರ ಕೈಗೊಳ್ಳುತ್ತಿದ್ದೇನೆ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಇದಕ್ಕೆ ಸ್ಪಷ್ಟನೆ ನೀಡಿದರು.

ನ್ಯಾಯಾಂಗದ ಮತ್ತು ಕೋರ್ಟ್‌ನ ಸಮಯ ಉಳಿಸಲು ದೀರ್ಘವಾದ ತೀರ್ಪುಗಳ ಉಕ್ತಲೇಖನವನ್ನು ತೆರೆದ ನ್ಯಾಯಾಲಯದಲ್ಲಿ ನೀಡದಂತೆ ಸುಪ್ರೀಂ ಕೋರ್ಟ್ ಮೊನ್ನೆಯಷ್ಟೇ ಆದೇಶಿಸಿದೆ. ಹೀಗಾಗಿ, ಇನ್ನು ಮುಂದೆ ದೀರ್ಘವಾದ ತೀರ್ಪುಗಳ ಉಕ್ತಲೇಖನವನ್ನು ತೆರೆದ ನ್ಯಾಯಾಲಯದಲ್ಲಿ ನೀಡುವುದಿಲ್ಲ. ಬದಲಿಗೆ ಕಚೇರಿಯಲ್ಲಿ ನೀಡಲಾಗುವುದು ಎಂದು ತಿಳಿಸಿದರು.

ಮಹತ್ವದ ಪ್ರಕರಣಗಳು ಅದರಲ್ಲೂ, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಕಳೆದ ತಿಂಗಳಲ್ಲಿ 550ಕ್ಕೂ ಹೆಚ್ಚು ಪ್ರಕರಣಗಳನ್ನು ಒಂದೇ ದಿನದಲ್ಲಿ ವಿಚಾರಣೆ ನಡೆಸಿದ್ದರು. ಅಂತೆಯೇ, ಈ ಹಿಂದೆ ಇದೇ ರೀತಿ ದಿನವೊಂದರಲ್ಲಿ 600ಕ್ಕೂ ಹೆಚ್ಚು ಪ್ರಕರಣಗಳನ್ನು ವಿಚಾರಣೆ ನಡೆಸಿದ್ದಾರೆ. ಇವರಿಗೂ ಮೊದಲು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು ಏಕಸದಸ್ಯ ನ್ಯಾಯಪೀಠದಲ್ಲಿದ್ದಾಗ ಇದೇ ರೀತಿ ಅತಿ ಹೆಚ್ಚು ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿದ ಹೆಗ್ಗಳಿಕೆ ಹೊಂದಿದ್ದಾರೆ.

ಇದನ್ನೂ ಓದಿ : ಮಲೆ ಮಹದೇಶ್ವರ ಬೆಟ್ಟ ಮಾದಪ್ಪನ ಹುಂಡಿಯಲ್ಲಿ 2 ಕೋಟಿ ರೂ. ಸಂಗ್ರಹ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಟ್ರಾಫಿಕ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಯುವತಿ‌..!

ಬೆಂಗಳೂರು : ಯುವತಿಯೋರ್ವಳು ಟ್ರಾಫಿಕ್ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿರುವ ಘಟನೆ ಇಂದಿರಾನಗರ ಠಾಣಾ ವ್ಯಾಪ್ತಿಯ ESI ಆಸ್ಪತ್ರೆಯ ಜಂಕ್ಷನ್​​​​ನಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಬಾಡಿ ಕ್ಯಾಮೆರಾ

Live Cricket

Add Your Heading Text Here