ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಸಿ.ಟಿ.ರವಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ವಿಚಾರಣೆ ನಡೆಸಿದ ಹೈಕೋರ್ಟ್ ಸಿ.ಟಿ.ರವಿಗೆ ಬಿಗ್ ರಿಲೀಫ್ ನೀಡಿದೆ.
ಬಂಧನಕ್ಕೆ ಒಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿಯನ್ನ ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಜೊತೆಗೆ ವಿಚಾರಣೆಗೆ ಸಹಕರಿಸುವಂತೆ ಕೋರ್ಟ್ ಸಿ.ಟಿ ರವಿಗೆ ಷರತ್ತು ವಿಧಿಸಿ, ಎಲ್ಲಿದ್ದಾರೋ ಅಲ್ಲಿಂದಲೇ ಬಿಡುಗಡೆ ಮಾಡುವಂತೆ ಆದೇಶ ನೀಡಿದೆ.
ಇನ್ನೊಂದು ಕಡೆ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಹ ಜಾಮೀನು ಕೋರಿ ಅರ್ಜಿಯನ್ನು ಸಿ.ಟಿ. ರವಿ ಪರ ವಕೀಲರು ಸಲ್ಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರು ನಾಳೆಗೆ ಮುಂದೂಡಿತ್ತು. ಆದರೆ ಹೈಕೋರ್ಟ್ ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.
ಇದನ್ನೂ ಓದಿ : ಸಿ.ಟಿ ರವಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು – ಬೊಮ್ಮಾಯಿ..!
Post Views: 132