‘ಕನ್ನಡದ ಲೇಡಿ ಸೂಪರ್ ಸ್ಟಾರ್’ ರಚಿತಾ ರಾಮ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಗುಳಿಕೆನ್ನೆ ಬೆಡಗಿ ಎಂದೇ ಪ್ರಸಿದ್ಧಿಯಾಗಿರುವ ರಚಿತಾ ರಾಮ್ ಅವರ ಹುಟ್ಟುಹಬ್ಬವನ್ನು ‘ಕಲ್ಟ್’ ಚಿತ್ರದ ಚಿತ್ರೀಕರಣ ಸೆಟ್ನಲ್ಲಿ ಆಚರಣೆ ಮಾಡಲಾಯಿತು.
ಅರಸಿ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಚಿತಾ ರಾಮ್, ಬುಲ್ ಬುಲ್ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿದ್ರು. ದಿಲ್ ರಂಗೀಲಾ, ಅಂಬರೀಷ, ರನ್ನ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿರುವ ರಚಿತಾ ರಾಮ್, ರಿಯಾಲಿಟಿ ಶೋಗಳ ಜಡ್ಜ್ ಆಗಿ ಕೂಡ ಮಿಂಚಿದ್ದಾರೆ.
ಸಂಜು ವೆಡ್ಸ್ ಗೀತಾ 2 ಶೂಟಿಂಗ್ ಮುಗಿಸಿರುವ ರಚಿತಾ ರಾಮ್, ಈಗ ಹೊಸ ನಟರಿಗೆ ಪ್ರೋತ್ಸಾಹ ನೀಡಲು ಮುಂದಾಗಿದ್ದಾರೆ. ಸಚಿವ ಜಮೀರ್ ಅಹಮದ್ ಪುತ್ರ ಝೈದ್ ಖಾನ್ ಎರಡನೇ ಚಿತ್ರ “ಕಲ್ಟ್’ಗೆ ರಚಿತಾ ನಾಯಕಿಯಾಗಿದ್ದಾರೆ.
ಝೈದ್ ಖಾನ್ ಅವರೊಂದಿಗೆ ಡಿಂಪಲ್ ಕ್ವೀನ್ ರಚಿತಾರಾಮ್ ಹಾಗೂ ಉಪಾಧ್ಯಕ್ಷ ಖ್ಯಾತಿಯ ಮಲೈಕಾ ನಾಯಕಿಯರಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಅಚ್ಯುತ್ ಕುಮಾರ್ ಸೇರಿದಂತೆ ಅನೇಕರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಲೋಕಿ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣಗೊಳ್ಳುತ್ತಿದ್ದು, ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದ್ದು. ಜೆ.ಎಸ್.ವಾಲಿ ಛಾಯಾಗ್ರಹಣ ನಿರ್ವಹಿಸಿದ್ರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನದ ಹೊಣೆ ಹೊತ್ತಿದ್ದಾರೆ. ರವಿವರ್ಮಾ ಸಾಹಸ ನಿರ್ದೇಶನ ಹಾಗೂ ಭೂಷಣ್-ಸಂತು ಮಾಸ್ಟರ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿರಲಿದೆ.
ಇದನ್ನೂ ಓದಿ : ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಭೈರಾದೇವಿ’ ಸಿನಿಮಾ ಇಂದು ರಾಜ್ಯಾದ್ಯಂತ ರಿಲೀಸ್..!