ಬೆಂಗಳೂರು : ‘ಕಲ್ಟ್’ ಸಿನಿಮಾದ ಹೀರೋ ಜೈದ್ ಹಾಗೂ ನಿರ್ದೇಶಕ ಅನಿಲ್ ಮೇಲೆ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಸಚಿವ ಜಮೀರ್ ಪುತ್ರನ ಸಿನಿಮಾ ಟೀಂ ಯಡವಟ್ಟಿನಿಂದ ಕಲ್ಟ್ ಮೂವಿ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ ಡ್ರೋನ್ ಟೆಕ್ನಿಷಿಯನ್.
ಇದೇ ತಿಂಗಳ ನ.25ರಂದು ಚಿತ್ರದುರ್ಗದಲ್ಲಿ ಕಲ್ಟ್ ಚಿತ್ರತಂಡ ಶೂಟಿಂಗ್ ನಡೆಸುತ್ತಿತ್ತು. ಕಲ್ಟ್ ಚಿತ್ರಕ್ಕೆ ಸಂತೋಷ್ ಡ್ರೋನ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಹಲವು ಸಿನಿಮಾಗಳಿಗೆ ಡ್ರೋನ್ ಟೆಕ್ನಿಷಿಯನ್ ಆಗಿ ಕೆಲಸ ಮಾಡಿರುವ ಸಂತೋಷ್ ಸ್ವಂತವಾಗಿ ಡ್ರೋನ್ ಹೊಂದಿದ್ದರು. 25 ಲಕ್ಷ ರೂ. ಸಾಲಸೋಲ ಮಾಡಿ ಡ್ರೋನ್ ಖರೀದಿಸಿದ್ದ ಸಂತೋಷ್ ಸಿನಿಮಾ ಶೂಟಿಂಗ್‌ಗಾಗಿ ದಿನಕ್ಕೆ 25,000 ರೂ. ಚಾರ್ಜ್ ಮಾಡುತ್ತಿದ್ದರು.
ಡ್ರೋನ್‌ನಲ್ಲಿ ಚಿತ್ರೀಕರಣ ಮಾಡುವುದು ರಿಸ್ಕ್ ಇದೆ ಅಂತ ಎಚ್ಚರಿಕೆ ಕೊಟ್ಟಿದ್ದರೂ ನಿರ್ದೇಶಕ ಮಾಡಲೇಬೇಕು ಎಂದು ಒತ್ತಾಯ ಮಾಡಿದ್ರು ಎನ್ನಲಾಗಿದೆ. ಶೂಟಿಂಗ್ ವೇಳೆ ಡ್ರೋನ್ ವಿಂಡ್ ಫ್ಯಾನ್‌ಗೆ ಟಚ್ ಆಗಿ ಪೀಸ್ ಪೀಸ್ ಆಗಿತ್ತು. ಇದಾದ ಬಳಿಕ ಸಂತೋಷ್‌ಗೆ ಕೊಂಚವೂ ನಷ್ಟ ಕಟ್ಟಿಕೊಡದ ಚಿತ್ರತಂಡ ಕಲ್ಟ್ ಚಿತ್ರವನ್ನ ಸಚಿವ ಜಮೀರ್ ಪುತ್ರ ಜೈದ್ ನಿರ್ಮಾಣ ಮಾಡುತ್ತಿದ್ರು. ಹೀಗಾಗಿ ಸಂತೋಷ್ ಜೈದ್ ಬಳಿಯೇ ಪರಿಹಾರ ನೀಡುವಂತೆ ಕೇಳಿಕೊಂಡಿದ್ದ. ಆದ್ರೆ ಸಂತೋಷ್ ಬಳಿ ವೈಟ್ ಪೇಪರ್ ಮೇಲೆ ಜಮೀರ್ ಪುತ್ರ ಜೈದ್ ಸಹಿ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಒಂದೂವರೆ ಲಕ್ಷ ರೂ. ಮೌಲ್ಯದ ಫುಟೇಜ್ ರೆಕಾರ್ಡಿಂಗ್ ಆಗಿದ್ದ ಮೆಮೊರಿ ಕಾರ್ಡ್ ಕಿತ್ತುಕೊಂಡಿದ್ದಾರೆ.
ಇದರಿಂದ ಮನನೊಂದು ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ. ಘಟನೆ ಬಳಿಕ ಸಂತೋಷ್ ಸಹೋದರಿ ಮಾಗಡಿ ರಸ್ತೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಲು ಮುಂದಾದರು. ಆದ್ರೆ ಪೊಲೀಸರು ದೂರು ಸ್ವೀಕರಿಸದೇ ವಾಪಸ್ ಕಳುಹಿಸಿದ್ದರು ಅನ್ನೋ ಆರೋಪವೂ ಕೇಳಿ ಬಂದಿದೆ.
ಇದನ್ನೂ ಓದಿ : ತಮಿಳುನಾಡಿಗೆ ಇಂದು ಅಪ್ಪಳಿಸಲಿದೆ ‘ಫೆಂಗಲ್’ ಸೈಕ್ಲೋನ್.. ಭೂಕುಸಿತ ಸಾಧ್ಯತೆ – ಬೆಂಗಳೂರಿಗೂ ಎಫೆಕ್ಟ್..!