Download Our App

Follow us

Home » ರಾಷ್ಟ್ರೀಯ » ಕೇದಾರನಾಥದಲ್ಲಿ ಹಾನಿಗೊಳಗಾದ ಹೆಲಿಕಾಪ್ಟರ್‌ ಏರ್‌ಲಿಫ್ಟ್‌ ವೇಳೆ ಪತನ..!

ಕೇದಾರನಾಥದಲ್ಲಿ ಹಾನಿಗೊಳಗಾದ ಹೆಲಿಕಾಪ್ಟರ್‌ ಏರ್‌ಲಿಫ್ಟ್‌ ವೇಳೆ ಪತನ..!

ಉತ್ತರಾಖಂಡ : ದುರಸ್ತಿಗಾಗಿ ಎತ್ತಿಕೊಂಡು ಸಾಗುತ್ತಿದ್ದಾಗ ಖಾಸಗಿ ಹೆಲಿಕಾಪ್ಟರ್‌ ಪತನಗೊಂಡ ಘಟನೆ ಉತ್ತರಾಖಂಡದ ಕೇದಾರನಾಥದಲ್ಲಿ ನಡೆದಿದೆ. ಅದೃಷ್ಟವಶಾತ್​​  ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇದಾರನಾಥ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ವೇಳೆ ಹೆಲಿಕಾಪ್ಟ‌ರ್​​ವೊಂದು ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿತ್ತು. ಲ್ಯಾಂಡಿಂಗ್ ಸಮಯದಲ್ಲಿ ಹಾನಿಗೊಳಗಾದ ಹೆಲಿಕಾಪ್ಟರ್ ಅನ್ನು ಎಂಐ-17 ಹೆಲಿಕಾಪ್ಟ‌ರ್ ಎತ್ತಿಕೊಂಡು ಸಾಗುತ್ತಿತ್ತು. ಈ ವೇಳೆ ಹೆಲಿಕಾಪ್ಟರ್‌ ಜಾರಿ ಬಿದ್ದು ಮಂದಾಕಿನಿ ನದಿಯ  ಬಳಿ ಪತನಗೊಂಡಿದೆ.

ಎಸ್‌ಡಿಆರ್‌ಎಫ್ ತಂಡವು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪರಿಶಿಲನೆ ನಡೆಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ : ನಟ ದರ್ಶನ್​ಗೆ ಜೈಲಲ್ಲಿ ರಾಜಾತಿಥ್ಯ ಪ್ರಕರಣ – ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿ ಪ್ರತಿಭಟನೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here