Download Our App

Follow us

Home » ರಾಜ್ಯ » ಪಾನಿಪುರಿ ಬೆನ್ನಲ್ಲೇ ಶವರ್ಮಾದಲ್ಲೂ ಅಪಾಯಕಾರಿ ಬಾಕ್ಟೀರಿಯಾ ಪತ್ತೆ : ಬ್ಯಾನ್​ಗೆ ಚಿಂತನೆ..!

ಪಾನಿಪುರಿ ಬೆನ್ನಲ್ಲೇ ಶವರ್ಮಾದಲ್ಲೂ ಅಪಾಯಕಾರಿ ಬಾಕ್ಟೀರಿಯಾ ಪತ್ತೆ : ಬ್ಯಾನ್​ಗೆ ಚಿಂತನೆ..!

ಬೆಂಗಳೂರು : ಗೋಬಿ, ಕಬಾಬ್, ಪಾನಿಪುರಿ ಬಳಿಕ ಶವರ್ಮಾಗೂ ಸಂಕಷ್ಟ ಎದುರಾಗಿದೆ. ಆರೋಗ್ಯದ ದೃಷ್ಟಿಯಿಂದ ಇದೀಗ ಶವರ್ಮಾ ಬ್ಯಾನ್​​ಗೂ ಆಹಾರ ಮತ್ತು ಗುಣಮಟ್ಟ ಇಲಾಖೆ ಚಿಂತನೆ ನಡೆಸಿದೆ. ಆಹಾರ & ಗುಣಮಟ್ಟ ಇಲಾಖೆಯು ರಾಜ್ಯದ ವಿವಿಧೆಡೆಯಿಂದ 17 ಶವರ್ಮಾ ಮಾದರಿ ಪರೀಕ್ಷೆ ನಡೆಸಿದ್ದು. 17ರ ಪೈಕಿ 8 ಮಾದರಿಯಲ್ಲಿ ಬ್ಯಾಕ್ಟೀರಿಯಾ ಈಸ್ಟ್ ಪತ್ತೆಯಾಗಿದೆ.

ಸರಿಯಾದ ರೀತಿಯಲ್ಲಿ ಆಹಾರ ತಯಾರಿಸದ ಕಾರಣ ಬಾಕ್ಟೀರಿಯಾಗಳು ಪತ್ತೆಯಾಗಿವೆ. ಈಗಾಗಲೇ ಅಸುರಕ್ಷಿತ ಶವರ್ಮಾ ನೀಡಿರುವ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಶವರ್ಮಾ ಮಾರಾಟಗಾರರಿಗೆ FSSAI ನೋಂದಣಿ ಕಡ್ಡಾಯಗೊಳಿಸಲಾಗಿದೆ. ನೋಂದಣಿ ಪತ್ರ ಪ್ರದರ್ಶನ ಮಾಡದಿದ್ರೆ ಮಾರಾಟಕ್ಕೆ ಬ್ಯಾನ್ ಮಾಡುವ ಎಚ್ಚರಿಕೆ ನೀಡಲಾಗಿದೆ. ಶವರ್ಮಾ ತಯಾರಿಕೆ ವೇಳೆ ಶುಚಿತ್ವ ಕಾಪಾಡುವಂತೆ ಸೂಚನೆ ನೀಡಲಾಗಿದ್ದು ಶುಚಿತ್ವ ನಿರ್ವಹಣೆ, ನೋಂದಣಿ ಮಾಡಿಸದಿದ್ರೆ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಕಬಾಬ್‌ ತಯಾರಿಕೆಯಲ್ಲಿ ಬಳಸಲಾಗುವ ಕೃತಕ ಬಣ್ಣದಲ್ಲಿ ಅಪಾಯಕಾರಿ ಅಂಶ ಪತ್ತೆಯಾದ ಹಿನ್ನೆಲೆ ಬಣ್ಣ ಬಳಸಬಾರದು ಎಂದು ಕರ್ನಾಟಕ ಆರೋಗ್ಯ ಇಲಾಖೆ ಇತ್ತೀಚಿಗೆ ಆದೇಶ ಹೊರಡಿಸಿದೆ. ಅಲ್ಲದೆ ಗೋಬಿ ಮಂಚೂರಿ, ಕಾಟನ್‌ ಕ್ಯಾಂಡಿಗೂ ಬಣ್ಣ ಬಳಸದಂತೆ ಸೂಚಿಸಿದೆ. ಅದರ ನಂತರ ಈಗ ಶವರ್ಮಾದಲ್ಲೂ ಆರೋಗ್ಯಕ್ಕೆ ಹಾನಿಯುಂಟುಮಾಡುವ ಅಂಶ ಇರುವುದು ಬಹಿರಂಗವಾಗಿದೆ. ಬೆಂಗಳೂರಿನ ಎಫ್‌ಎಸ್‌ಎಸ್‌ಎಐ ಪರೀಕ್ಷೆಯಲ್ಲಿ ಶವರ್ಮಾಗಳಲ್ಲಿ ಬ್ಯಾಕ್ಟೀರಿಯಾ ಮತ್ತು ಯೀಸ್ಟ್ ಅಂಶವಿರೋದು ಪತ್ತೆಯಾಗಿದೆ.

ಇದನ್ನೂ ಓದಿ : ವಾಲ್ಮೀಕಿ ನಿಗಮದ ಹಗರಣ ಬೆನ್ನಲ್ಲೇ ಮತ್ತೊಂದು ಬಹೃತ್​​ ಅಕ್ರಮ : ಬಿಟಿವಿ ಬಯಲು ಮಾಡ್ತಿದೆ BBMP ಆಡಳಿತದ ಬಂಡವಾಳ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here