ಚಿತ್ರದುರ್ಗ : ನನ್ನ ಮಗನನ್ನು ಕೊಂದ ದರ್ಶನ್ ಕೂಡಾ ಸಾಯಬೇಕು. ಪವಿತ್ರಾಗೌಡಳನ್ನು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ಕೊಲೆಯಾದ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಹಿಡಿಶಾಪ ಹಾಕಿದ್ದಾರೆ.
ರೇಣುಕಾಸ್ವಾಮಿ ಅಂತ್ಯಕ್ರಿಯೆ ಬಳಿಕ ರುದ್ರಭೂಮಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 15 ದಿನದೊಳಗೆ ದರ್ಶನ್ ಸಾಯಲಿ. ನಮ್ಮ ವಂಶ ನಿರ್ವಂಶ ಮಾಡಿದ ದರ್ಶನ್‌ಗೆ ತಕ್ಕ ಶಾಸ್ತಿ ಆಗಲಿ. ನನ್ನ ಮಗನನ್ನು ಕೊಂದಂತೆ ಅವನನ್ನು ಸಾಯಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಂಡ ಬರುತ್ತಾನೆ ಎಂದು ನನ್ನ ಸೊಸೆ ಕಾದು ಕುಳಿತಿದ್ದಳು. ಪಾಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಪವಿತ್ರಾಗೌಡ ವಿರುದ್ಧ ರೇಣುಕಾಸ್ವಾಮಿ ಹೆತ್ತವ್ವ ರತ್ನಪ್ರಭಾ ಹರಿಹಾಯ್ದಿದ್ದಾರೆ.
ಇದನ್ನೂ ಓದಿ : ದರ್ಶನ್ ಬಾಳಿಗೆ ಪವಿತ್ರಾ ಗೌಡ ಎಂಟ್ರಿ ಕೊಟ್ಟಿದು ಯಾವಾಗ? ಇಲ್ಲಿದೆ ಡಿಟೇಲ್ಸ್..!
Post Views: 33