ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4 ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಹೀಗಾಗಿ ಕೊಲೆ ಆರೋಪಿ ದರ್ಶನ್ಗೆ ಜೈಲೇ ಗತಿಯಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್ಶೀಟ್ ಸಲ್ಲಿಕೆ ಆದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಯಿತು. ಕೇಸ್ಗೆ ಸಂಬಂಧಿಸಿದಂತೆ ಕೆಲವು ಅನುಮಾನಗಳು ಇದ್ದಿದ್ದರಿಂದ ದರ್ಶನ್ ಪರ ವಕೀಲರು ಬಳ್ಳಾರಿ ಜೈಲಿಗೆ ಭೇಟಿ ನೀಡಿ ಮಾತುಕಥೆ ನಡೆಸಿ ಬಂದಿದ್ದರು.
ಈಗ ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ಇದನ್ನೂ ಓದಿ : ಬೆಂಗಳೂರಲ್ಲಿ BMTCಗೆ ಮತ್ತೊಂದು ಬಲಿ – ಬಸ್ ಹರಿದು ಬೈಕ್ ಸವಾರ ಮೃತ್ಯು..!
Post Views: 90