ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದ ದರ್ಶನ್ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಮಧ್ಯಂತರ ಬೇಲ್ ಸಿಕ್ಕ ಬೆನ್ನಲ್ಲೇ ದರ್ಶನ್ಗೆ ಬಿಗ್ ಶಾಕ್ ಎದುರಾಗಿದ್ದು, ಹೈಕೋರ್ಟ್ ನೀಡಿದ ಮಧ್ಯಂತರ ಬೇಲ್ ಆದೇಶ ಪ್ರಶ್ನಿಸಲು ಇದೀಗ ತಯಾರಿ ಮಾಡಲಾಗುತ್ತಿದೆ. ಸುಪ್ರೀಂಕೋರ್ಟ್ ಮೊರೆ ಹೋಗಲು ಮಹತ್ವದ ಚರ್ಚೆ ನಡೆಯುತ್ತಿದ್ದು, ಸೋಮವಾರದ ನಂತರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.
ಬೆನ್ನುನೋವು ಚಿಕಿತ್ಸೆಗೆಂದು ಹೈಕೋರ್ಟ್ ದರ್ಶನ್ಗೆ 45 ದಿನಗಳ ಮಧ್ಯಂತರ ಜಾಮೀನು ನೀಡಿದೆ. ಈಗ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಹಾಕೋ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಇವತ್ತಿನಿಂದ ಸೋಮವಾರದವರೆಗೂ ರಜೆ ಇದೆ, ಹೀಗಾಗಿ ಸೋಮವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕೋ ಸಾಧ್ಯತೆಯಿದೆ. ಹೈಕೋರ್ಟ್ ಆದೇಶ ಪ್ರತಿಯನ್ನು ಅವಲೋಕಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುತ್ತದೆ.
ಈಗಾಗಲೇ ಹಿರಿಯ ಅಧಿಕಾರಿಗಳ ಜೊತೆ ಒಂದು ಸುತ್ತು ಚರ್ಚೆ ಮಾಡಿದ್ದು, ಸೋಮವಾರದ ಒಳಗೆ ಕಮಿಷನರ್ ದಯಾನಂದ್ ಅವರು ನಿರ್ಧಾರ ಮಾಡಲಿದ್ದಾರೆ. ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಮೀಟಿಂಗ್ ನಡೆಯುತ್ತಿದ್ದು, ಕಾನೂನು ತಜ್ಞರ ಅಭಿಪ್ರಾಯ ಪಡೆದು ಅರ್ಜಿ ಸಲ್ಲಿಸೋ ಸಾಧ್ಯತೆಯಿದೆ. ಯಾವ-ಯಾವ ಗ್ರೌಂಡ್ ಮೇಲೆ ಪ್ರಶ್ನೆ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : 2025ರಲ್ಲಿ ದರ್ಶನ್ ರಾಜಕೀಯಕ್ಕೆ ಎಂಟ್ರಿ – ಸ್ಫೋಟಕ ಭವಿಷ್ಯ ನುಡಿದ ಅವಧೂತ ಅರ್ಜುನ್ ಗುರೂಜಿ..!