ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ಗೆ ಹಿನ್ನಡೆಯಾಗಿದ್ದು, ಮತ್ತೆ ಜೈಲುವಾಸವೇ ಗತಿಯಾಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೀಡಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ನ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಲಾಯಿತು.
ಈ ವೇಳೆ ವಿಚಾರಣೆ ನಡೆಸಿದ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್, ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ 14 ದಿನಗಳ ಕಾಲ ಅಂದರೆ ಆಗಸ್ಟ್ 1ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.
ನಟ ದರ್ಶನ್,ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಮೂರನೇ ಬಾರಿ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದು, ಮತ್ತೆ 14 ದಿನದ ನಂತರ ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರು ಪಡಿಸಬೇಕು.
ಇದನ್ನೂ ಓದಿ : ಹಾರಾರ್ ಜಾನರ್ ‘ಹಗ್ಗ’ ಚಿತ್ರದ ಟೀಸರ್ ರಿಲೀಸ್..!