Download Our App

Follow us

Home » ಸಿನಿಮಾ » ದರ್ಶನ್​ಗೆ ಮತ್ತೊಂದು ಸಂಕಷ್ಟ – ರೇಣುಕಾಸ್ವಾಮಿ ಹತ್ಯೆಗೆ ಬಳಸಿದ್ದ 84 ಲಕ್ಷ ಹಣದ ಮೂಲ ಬೆನ್ನತ್ತಿ ಬಂದ ಐಟಿ..!

ದರ್ಶನ್​ಗೆ ಮತ್ತೊಂದು ಸಂಕಷ್ಟ – ರೇಣುಕಾಸ್ವಾಮಿ ಹತ್ಯೆಗೆ ಬಳಸಿದ್ದ 84 ಲಕ್ಷ ಹಣದ ಮೂಲ ಬೆನ್ನತ್ತಿ ಬಂದ ಐಟಿ..!

ಬೆಂಗಳೂರು : ನಟ ದರ್ಶನ್​ಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಇಷ್ಟು ದಿನಗಳ ಕಾಲ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ತೀವ್ರ ವಿಚಾರಣೆ ಎದುರಿಸಿದ್ದಾರೆ. ಆದರೆ ಇದೀಗ ದರ್ಶನ್​ಗೆ ಹೊಸದೊಂದು ತಲೆಬಿಸಿ ಎದುರಾಗಿದೆ.

ಹೌದು.. ಐಟಿ ಅಧಿಕಾರಿಗಳು ದರ್ಶನ್ ಮನೆ ಮೇಲೆ ದಾಳಿ ಮಾಡಲು ತಯಾರಿ ನಡೆಸಿದ್ದಾರೆ. ಇದು ಕೂಡ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮುಂದುವರಿದ ಭಾಗ. ಅಂದರೆ, ಈ ಪ್ರಕರಣದಲ್ಲಿ 84 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದರು. ಆ ಹಣದ ಮೂಲ ಏನು ಎಂಬುದನ್ನು ತಿಳಿಯುವ ಉದ್ದೇಶದಿಂದ ಐಟಿ ಅಧಿಕಾರಿಗಳು ತನಿಖೆ ಮಾಡಲು ಮುಂದಾಗಿದ್ದಾರೆ. ಹಣದ ಬಗ್ಗೆ ಐಟಿ ಅಧಿಕಾರಿಗಳಿಗೆ ಪೊಲೀಸರು ಮಾಹಿತಿ ನೀಡಿದ್ದರು. ಇದೀಗ ಹಣದ ಮೂಲ ಪತ್ತೆ ಮಾಡಲು ಐಟಿ ಅಧಿಕಾರಿಗಳು ದರ್ಶನ್​ ವಿಚಾರಣೆಗೆ ಕೋರ್ಟ್​ನಿಂದ ಅನುಮತಿ ಪಡೆದಿದ್ದಾರೆ.

ಒಂದೆಡೆ ದರ್ಶನ್ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇನ್ನೊಂದೆಡೆ ಅವರಿಗೆ ಮತ್ತೆ ಕಾನೂನಿನ ಸಂಕಷ್ಟ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ. ಅಕ್ರಮ ಹಣ ವರ್ಗಾವಣೆ ಆಗಿದ್ದು ಕಂಡುಬಂದರೆ ಐಟಿ ಅಧಿಕಾರಿಗಳು ಹೆಚ್ಚಿನ ತನಿಖೆ ಮಾಡಬೇಕಾಗುತ್ತದೆ. ಅದಕ್ಕಾಗಿ ದರ್ಶನ್​ ಅವರನ್ನು ವಶಕ್ಕೆ ಪಡೆಯಲೂಬಹುದು. ಒಂದು ವೇಳೆ ರೇಣುಕಾಸ್ವಾಮಿ ಕೇಸ್​ನಲ್ಲಿ ದರ್ಶನ್​ಗೆ ಜಾಮೀನು ಸಿಕ್ಕರೂ ಹಣಕ್ಕೆ ಸಂಬಂಧಿಸಿದ ಕೇಸ್​ನಲ್ಲಿ ಜೈಲು ವಾಸ ಮುಂದುವರಿಯಬಹುದು.

ಈಗಾಗಲೇ ದರ್ಶನ್​ ಗ್ಯಾಂಗ್​​ನ ಮೂರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಕಾರ್ತಿಕ್​ (ಎ15), ಕೇಶವಮೂರ್ತಿ (ಎ16), ನಿಖಿಲ್ ನಾಯಕ್​ (ಎ17) ಜಾಮೀನು ಪಡೆದು ಸದ್ಯಕ್ಕೆ ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ : ಮುಡಾ ಹಗರಣ.. ಸಿಎಂ ಸಿದ್ದುಗೆ ಇಂದೇ ನಿರ್ಣಾಯಕ ದಿನ – ರಾಜ್ಯಪಾಲರ ಆದೇಶ ಎತ್ತಿ ಹಿಡಿಯುತ್ತಾ ಹೈಕೋರ್ಟ್​?

 

 

 

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here