Download Our App

Follow us

Home » ಅಪರಾಧ » ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ ನಟ ದರ್ಶನ್‌..!

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ ನಟ ದರ್ಶನ್‌..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದ ನಟ ದರ್ಶನ್​ ಇದೀಗ ಜೈಲು ಪಾಲಾಗಿದ್ದಾರೆ. ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಕೋರ್ಟ್‌ಗೆ ದರ್ಶನ್ ಅವರನ್ನು ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿ ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಮಹತ್ವದ ಆದೇಶ ನೀಡಿದೆ. ದರ್ಶನ್ ಸೇರಿದಂತೆ ಇತರ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ನಾಲ್ವರಿಗೆ ನ್ಯಾಯಾಂಗ ಬಂಧನ ವಿಧಿಸಿ ಪರಪ್ಪನ ಅಗ್ರಹಾರಕ್ಕೆ ರವಾನಿಸಲು ಕೋರ್ಟ್ ಆದೇಶ ನೀಡಿದೆ. ದರ್ಶನ್‌ ಜೊತೆಗೆ ವಿನಯ್, ಪ್ರದೋಶ್ ಮತ್ತು ಧನರಾಜು ಕಸ್ಟಡಿ ಅಂತ್ಯವಾಗಿದ್ದು, ಪೊಲೀಸರು ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಕೋರ್ಟ್ ಅವರಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಹೀಗಾಗಿ 13 ವರ್ಷಗಳ ಬಳಿಕ ಮತ್ತೆ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆ ಊಟ ಮಾಡಲಿದ್ದಾರೆ.

ಈ ಹಿಂದೆ ಪತ್ನಿ ವಿಜಯಲಕ್ಷ್ಮಿ ಅವರ ಮೇಲೆ ಹಲ್ಲೆ ನಡೆಸಿದ್ದ ಕೇಸ್​ನಲ್ಲಿ ದರ್ಶನ್ ಜೈಲು ಪಾಲಾಗಿದ್ದರು. ಇಂದು ಕೋರ್ಟ್‌ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆಯಲ್ಲಿ 2ನೇ ಬಾರಿ ಸೆಂಟ್ರಲ್ ಜೈಲು ಸೇರಲಿದ್ದಾರೆ.

ಇದನ್ನೂ ಓದಿ : ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ್ದ ಅರ್ಚಕ ಲಕ್ಷ್ಮೀಕಾಂತ್‌ ದೀಕ್ಷಿತ್‌ ನಿಧನ..!

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here