ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ್ ಮನೆ ಊಟ ಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್ ಪಡೆದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ದರ್ಶನ್ ಮನೆ ಊಟ ಬೇಕೆಂದು ಮನವಿ ಮಾಡಿ ಅರ್ಜಿ ಸಲ್ಲಿಸಿದ್ದರು.
ಆದರೆ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿ ಪರಪ್ಪನ ಅಗ್ರಹಾರ ಸೇರಿದ್ದ ನಟ ದರ್ಶನ್ಗೆ ರಾಜ್ಯಾತಿಥ್ಯ ಕೊಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದ ಬೆನ್ನಲ್ಲೇ ದರ್ಶನ್ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ದರ್ಶನ್ ಅರ್ಜಿ ಅಪ್ರಸ್ತುತ ಎಂದು ಜಡ್ಜ್ ತಿಳಿಸಿದ್ದಾರೆ. ಹೀಗಾಗಿ ದರ್ಶನ್ ಪರ ವಕೀಲರು ಅರ್ಜಿ ಹಿಂಪಡೆದಿದ್ದಾರೆ.
ಇದನ್ನೂ ಓದಿ : ಮೈಸೂರಿನಲ್ಲಿ ಹಾಡಹಗಲೇ ಮನೆ ಕಳ್ಳತನಕ್ಕೆ ಯತ್ನ – ದೃಶ್ಯ ಸಿಸಿಟಿವಿಯಲ್ಲಿ ಸೆರೆ..!
Post Views: 71