ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ ಕಳೆದ ಡಿಸೆಂಬರ್ 13ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. 185 ದಿನಗಳ ಬಳಿಕ ಸೆರೆವಾಸದಿಂದ ಮುಕ್ತಿ ಪಡೆದಿದ್ದ ದರ್ಶನ್ಗೆ ಪೊಲೀಸರು ಶಾಕ್ ಕೊಟ್ಟಿದ್ದು, ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಇನ್ನು ಶೀಘ್ರದಲ್ಲೇ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.
ಪೊಲೀಸರ SLPಯ ಪ್ರಮುಖ ಅಂಶಗಳೇನು ಗೊತ್ತಾ? ರಾಜ್ಯದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿರುವ ನಟ ದರ್ಶನ್ ಸಾಕ್ಷಿಗಳನ್ನು ತಿರುಚುವ ಸಾಧ್ಯತೆ ಇರುತ್ತದೆ. ಸತ್ರ ನ್ಯಾಯಾಲಯದಲ್ಲಿ ಆರೋಪ ನಿಗದಿ ಹಂತಕ್ಕೆ ಬಂದಿಲ್ಲ ಎಂದು ಆರೋಪ ಪಟ್ಟಿಯಲ್ಲಿ 262 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದೆ.
ಆರೋಪಿಗಳು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬಲವಂತವಾಗಿ ಕಾರಿನಲ್ಲಿ ಕರೆತಂದಿದ್ದಾರೆ. ಐಪಿಸಿ ಸೆಕ್ಷನ್ 364ರ ಅಡಿ ಅದು ಅಪರಾಧವಾಗಿದೆ. 76 ಮತ್ತು 91ನೇ ಪ್ರತ್ಯಕ್ಷ ಸಾಕ್ಷಿಗಳು ಸಿಆರ್‌ಪಿಸಿ 164ರ ಅಡಿ ಹೇಳಿಕೆ ನೀಡಿದ್ದಾರೆ. ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿರುವುದನ್ನ ಹೈಕೋರ್ಟ್ ಪರಿಗಣಿಸಿಲ್ಲ. ತನಿಖಾಧಿಕಾರಿ ಆರೋಪಿಗಳನ್ನ ಏಕೆ ಬಂಧಿಸಲಾಗುತ್ತಿದೆ ಎಂಬ ಸಾಮಾನ್ಯ ವಿಚಾರ ತಿಳಿಸಿದರೆ ಸಾಕು.
ದರ್ಶನ್ ಸರ್ಜರಿ ಅಂತ ಹೇಳಿ ವೈದ್ಯಕೀಯ ಮಧ್ಯಂತರ ಜಾಮೀನು ಪಡೆದಿದ್ರು. ಆದರೆ ದರ್ಶನ್ ಬೆನ್ನುನೋವಿಗೆ ಈವರೆಗೂ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. SLPಯಲ್ಲಿ ಈ ಎಲ್ಲಾ ಅಂಶಗಳನ್ನು ಪೊಲೀಸರು ಉಲ್ಲೇಖಿಸಿದ್ದಾರೆ. ಶೀಘ್ರದಲ್ಲೇ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ವಿಚಾರಣೆಗೆ ಬರಲಿದ್ದು, ಬೇಲ್ ಕ್ಯಾನ್ಸಲ್ ಆದರೆ ದರ್ಶನ್ ಮತ್ತೆ ಪರಪ್ಪನ ಅಗ್ರಹಾರ ಸೇರುವುದು ಫಿಕ್ಸ್ ಆಗಿದೆ.
ಇದನ್ನೂ ಓದಿ : ಇಸ್ರೋದ ನೂತನ ಮುಖ್ಯಸ್ಥರಾಗಿ ವಿ.ನಾರಾಯಣನ್ ಆಯ್ಕೆ – ಯಾರಿವರು ಗೊತ್ತಾ?