ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪರ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರ ರಾಜಾತಿಥ್ಯದ ಫೋಟೋ ವೈರಲ್ ಆದ ಬೆನ್ನಲ್ಲೇ ದರ್ಶನ್ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಿ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲಿನಲ್ಲಿರುವ ದರ್ಶನ್ ಅವರನ್ನು ಸದ್ಯ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ.
ಇವರಷ್ಟೇ ಅಲ್ಲದೇ ದರ್ಶನ್ ಗ್ಯಾಂಗ್ನ ಇತರೆ ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪ್ರಕರಣದಲ್ಲಿ ದರ್ಶನ್ ಸೇರಿ ಇತರ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮನವಿ ಮಾಡಿದ್ದರು. ಈ ಮನವಿಯನ್ನು ವಿಚಾರಣೆ ಮಾಡಿದ ಕೋರ್ಟ್ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಿ ಆದೇಶ ಹೊರಡಿಸಿದೆ.
ಪರಪ್ಪನ ಅಗ್ರಹಾರದಿಂದ ಯಾವುದೇ ಕ್ಷಣ ದರ್ಶನ್ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಆಗಲಿದ್ದು, ಹಗಲಿನಲ್ಲೇ ಬಳ್ಳಾರಿ ಜೈಲಿಗೆ ಪೊಲೀಸರು ದರ್ಶನ್ನ ಕರೆದೊಯ್ಯಲಿದ್ದಾರೆ. ಬಿಗಿ ಬಂದೋಬಸ್ತ್ನಲ್ಲಿ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ. ಬಳ್ಳಾರಿ ಜೈಲರ್ ಲತಾಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ದರ್ಶನ್ಗೆ ಪ್ರತ್ಯೇಕ ಸೆಲ್ನಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ದರ್ಶನ್ ಬಿಟ್ಟು ಬೇರೆ ಯಾರೂ ಬ್ಯಾರಕ್ನಲ್ಲಿ ಇರುವಂತಿಲ್ಲ. ಮೊಬೈಲ್, ಸಿಗರೇಟ್, ಪಾನ್ ಯಾವ್ದೂ ದರ್ಶನ್ ಹತ್ತಿರಕ್ಕೆ ಸುಳಿಯುವಂತಿಲ್ಲ. ಕೇಸ್ ಇದ್ದಾಗ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ಗೆ ಹಾಜರು ಪಡಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.
ಈಗಾಗಲೇ ದರ್ಶನ್ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ನಡುಗಿ ಹೋಗಿದ್ದು, ಹೀಗಾಗಿ ಬಳ್ಳಾರಿ ಜೈಲಿನ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಕಾರಾಗೃಹ ಇಲಾಖೆ ಸೂಚನೆ ನೀಡಿದೆ. ಸದ್ಯ ಸಿಗರೇಟ್ ಫೋಟೋ ವೈರಲ್ ಆಗಿ ದರ್ಶನ್ ಮೇಲೆ 2 ಕೇಸ್ ದಾಖಲಾಗಿದ್ದು, ದರ್ಶನ್ ಪ್ರಕರಣದಲ್ಲಿ ಇದುವರೆಗೂ ಪರಪ್ಪನ ಅಗ್ರಹಾರದಿಂದ 12 ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ.
ಇದನ್ನೂ ಓದಿ : ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ – ನ್ಯಾಯಾಲಯದಿಂದ ಮಹತ್ವದ ಆದೇಶ..!