ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರು ಈಗ ಜಾಮೀನು ಪಡೆದು ಹೊರ ಬಂದಿದ್ದಾರೆ. ಅವರಿಗೆ ಬೆನ್ನು ನೋವು ಅತಿಯಾಗಿ ಕಾಡಿತ್ತು. ಡಿಸ್ಕ್ನ ಸಮಸ್ಯೆಯಿಂದಾಗಿ ಈ ರೀತಿ ಆಗಿದೆ ಎಂದು ವರದಿಯಲ್ಲಿ ಉಲ್ಲೇಖ ಆಗಿತ್ತು. ಈಗ ದರ್ಶನ್ ಅವರಿಗೆ ಆಪರೇಷನ್ ಮಾಡಿಸೋದು ಅನಿವಾರ್ಯ ಆಗಿದೆ. ಬೆನ್ನು ನೋವು ವಾಸಿಯಾಗುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ, ಬೇರೆ ದಾರಿ ಕಾಣದೆ ದರ್ಶನ್ ಆಪರೇಷನ್ಗೆ ಒಪ್ಪಿಗೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಆಸ್ಪತ್ರಯಿಂದ ಬಂದ ಬಳಿಕ ಅವರು ಇಷ್ಟು ದಿನಗಳ ಕಾಲ ಅವರು ಫಿಸಿಯೋ ಥೆರಪಿ ಮೂಲಕ ನೋವನ್ನು ಕಡಿಮೆ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಸದ್ಯ ಬೆನ್ನುನೋವು ಹೆಚ್ಚಾಗಿದ್ದರಿಂದ ಆಪರೇಷನ್ ಮಾಡಿಸೋದು ಅನಿವಾರ್ಯ ಆಗಿದೆ. ಹೀಗಾಗಿ, ಬೇರೆ ದಾರಿ ಕಾಣದೆ ಆಪರೇಷನ್ಗೆ ದರ್ಶನ್ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಸಂಕ್ರಾಂತಿ ಹೊತ್ತಿನಲ್ಲಿ ಆಪರೇಷನ್? ಸಂಕ್ರಾತಿ ವೇಳೆಗೆ ದರ್ಶನ್ ಆಪರೇಷನ್ ಮಾಡಿಸಿಕೊಳ್ಳಲಿದ್ದು, ಮೈಸೂರಿನಲ್ಲಿಯೇ ಆಪರೇಷನ್ ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ದರ್ಶನ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಅಜಯ್ ಹೆಗಡೆ ಅವರ ಸೂಚನೆಯಂತೆ ಆಪರೇಷನ್ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಫೆಬ್ರವರಿಯಲ್ಲಿ ದರ್ಶನ್ ‘ಡೆವಿಲ್’ ಚಿತ್ರೀಕರಣದಲ್ಲಿ ಭಾಗಿಯಾಗುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಬೆಂಗಳೂರು : ಕಾಲ್ ಸೆಂಟರ್ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಇಬ್ಬರ ಬಂಧನ..!