Download Our App

Follow us

Home » ಸಿನಿಮಾ » ದರ್ಶನ್​​​​​​ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್ :​ ಅಭಿಮಾನಿಗಳಿಗೆ ವಿಶೇಷ ಮನವಿ – ಹೇಳಿದ್ದೇನು?

ದರ್ಶನ್​​​​​​ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್ :​ ಅಭಿಮಾನಿಗಳಿಗೆ ವಿಶೇಷ ಮನವಿ – ಹೇಳಿದ್ದೇನು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಸೇರಿ ಒಟ್ಟು 13 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನೂ 4 ಆರೋಪಿಗಳು ತುಮಕೂರು ಜೈಲಿನಲ್ಲಿದ್ದಾರೆ. ಮೊನ್ನೆಯಷ್ಟೇ ಕೊಲೆ ಕೇಸ್​ನಲ್ಲಿ ಜೈಲುಪಾಲಾದ ನಟ ದರ್ಶನ್​​ನನ್ನು ನೋಡಲು ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಿನೀಶ್​ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರು.

ಇದೀಗ ಜೈಲಿನಲ್ಲಿ ದರ್ಶನ್​ ಭೇಟಿಯಾದ ಬಳಿಕ ಪತ್ನಿ ವಿಜಯಲಕ್ಷ್ಮೀ ಇನ್​ಸ್ಟಾದಲ್ಲಿ ಭಾವುಕ ಪೋಸ್ಟ್​ ಹಾಕಿದ್ದಾರೆ. ದರ್ಶನ್​ ಸೆಲೆಬ್ರಿಟಿಗಳಿಗೆ ಹೇಳಿದ ಮಾತುಗಳನ್ನ ವಿಜಯಲಕ್ಷ್ಮೀ ಹಂಚಿಕೊಂಡಿದ್ದಾರೆ. ಸೆಲೆಬ್ರಿಟಿಗಳಿಗೆ ಶಾಂತವಾಗಿರಲು ದರ್ಶನ್​ ಸೂಚನೆ ಕೊಟ್ಟಿದ್ದಾರೆ ಎಂದು ವಿಜಯಲಕ್ಷ್ಮೀ ಪೋಸ್ಟ್​ನಲ್ಲಿ ಹೇಳಿಕೊಂಡಿದ್ದಾರೆ.

ದರ್ಶನ್ ನಿಮ್ಮನ್ನ ಎಷ್ಟು ಪ್ರೀತಿಸ್ತಾರೆ ಅನ್ನೋದು ನಿಮಗೆಲ್ಲ ಗೊತ್ತೇ ಇದೆ. ಇಂದು ನಾವು ಈ ಪರಿಸ್ಥಿತಿಯಲ್ಲಿದ್ದೇವೆ ಮತ್ತು ನಾವು ಅವನಿಂದ ದೂರವಿರುವುದು ದುಃಖಕರವಾಗಿದೆ. ನಾನು ಹೊರಗಿನ ಪರಿಸ್ಥಿತಿಯ ಬಗ್ಗೆ ವಿವರವಾಗಿ ಮಾತನಾಡಿದ್ದೇನೆ ಮತ್ತು ಅದು ಅವರ ಹೃದಯವನ್ನು ಮುಟ್ಟಿದೆ.

ಅವರು ತಮ್ಮ ಎಲ್ಲಾ ಸೆಲೆಬ್ರಿಟಿಗಳಿಗೆ ಶಾಂತವಾಗಿರಲು ಮತ್ತು ಒಳ್ಳೆಯ ಕಾರ್ಯಗಳನ್ನು ಮಾಡುವತ್ತ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ. ನಮ್ಮ ರಾಷ್ಟ್ರದ ನ್ಯಾಯಾಂಗ ವ್ಯವಸ್ಥೆಯಲ್ಲಿ ನಮಗೆ ಅಪಾರ ನಂಬಿಕೆ ಇದೆ ಮತ್ತು ಮುಂದೆ ಉಜ್ವಲವಾದ ದಿನಗಳು ಬರಲಿವೆ ಎಂದು ನನಗೆ ಖಾತ್ರಿಯಿದೆ.

ದರ್ಶನ್ ಅವರ ಅನುಪಸ್ಥಿತಿಯಲ್ಲಿ ಮಾತು/ನಡೆಯ ಮೂಲಕ ಅವರಿಗೆ ಹಾನಿ ಮಾಡಲು ಯತ್ನಿಸುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ ಎಂದು ನಾನು ದೃಢವಾಗಿ ನಂಬುತ್ತೇನೆ. ಈ ಕಷ್ಟದ ಸಮಯದಲ್ಲಿ ನಿಮ್ಮ ಬೆಂಬಲವನ್ನು ವಿನಂತಿಸಿ. ನೀವು ಶಾಂತವಾಗಿರುವುದು ನಮ್ಮ ದೊಡ್ಡ ಶಕ್ತಿಯಾಗಿದೆ. ಇದೂ ದಾಟಿ ಸತ್ಯಕ್ಕೆ ಜಯ ಸಿಗುತ್ತದೆ ಎಂದು ವಿಜಯಲಕ್ಷ್ಮೀ ಬಾವುಕ ಪೋಸ್ಟ್​ ಮಾಡಿದ್ದಾರೆ.

ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ ‘ಸೆಲೆಬ್ರಿಟಿಗಳನ್ನು’ ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ. ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ. ಸತ್ಯಮೇವ ಜಯತೆ

ಇದನ್ನೂ ಓದಿ : ಕದ್ದ ಚಿನ್ನಾಭರಣ ಖರೀದಿ – ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ..!

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here