ದಾವಣಗೆರೆ : ಫೆಬ್ರವರಿ 3 ಹಾಗೂ 4ರಂದು ಬೆಣ್ಣೆ ನಗರಿ ದಾವಣಗೆರೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕ ಹಾಗೂ ಅಲ್ಲಿಯ ಜಿಲ್ಲಾ ಘಟಕದ ಸಹಯೋಗದಲ್ಲಿ 38ನೇ ಪತ್ರಕರ್ತರ ರಾಜ್ಯ ಸಮ್ಮೇಳನ ಜರುಗಲಿದೆ.
ಫೆಬ್ರವರಿ 3 ರಂದು ಸಿಎಂ ಸಿದ್ದರಾಮಯ್ಯ ಅವರು ಪತ್ರಕರ್ತರ ರಾಜ್ಯ ಸಮಾವೇಶವನ್ನು ಉದ್ಘಾಟನೆ ಮಾಡಲಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಪ್ರಮುಖರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಫೆಬ್ರವರಿ 4 ರಂದು ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್ ಅಶೋಕ್ ಅವರು ಸಮಾರೋಪ ಸಮಾರಂಭದಲ್ಲಿ ಭಾಷಣ ಮಾಡಲಿದ್ದಾರೆ. ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯುರಪ್ಪ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ರಾಜ್ಯ ಪತ್ರಕರ್ತರ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಆಯ್ಕೆಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು 5500 ಕ್ಕೂ ಹೆಚ್ಚು ಪತ್ರಕರ್ತರ ಭಾಗಿ ಆಗುವ ನಿರೀಕ್ಷೆ ಇದೆ. ಈ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ದತಾ ಸಭೆ ನಡೆದಿದೆ. ಸಭೆಯಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರ್ ಭಾಗಿಯಾಗಿದ್ದರು.
ಇದನ್ನೂ ಓದಿ : ಕೊನೆಗೂ ನಿಗಮ ಮಂಡಳಿ ಪಟ್ಟಿ ಪ್ರಕಟ – 32 ಶಾಸಕರಿಗೆ ಅಧ್ಯಕ್ಷ ಸ್ಥಾನ ನೀಡಿ ಆದೇಶ..!