ಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್ ಅವರು ವಿದೇಶ ಪ್ರವಾಸ ಕೈಗೊಂಡಿರುವ ಸಮಯದಲ್ಲೇ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ನಡೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ 35 ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು.
ಹೈಕಮಾಂಡ್ನಿಂದ KPCC ಬದಲಾವಣೆ ಮೆಸೇಜ್ ಬಂದ ಬೆನ್ನಲ್ಲೇ, ನ್ಯೂ ಇಯರ್ ಡಿನ್ನರ್ ನೆಪದಲ್ಲಿ ನಿನ್ನೆ ರಾತ್ರಿ ಭಾರೀ ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಸಿದ್ದರಾಮಯ್ಯ ಬಣದ 7 ಸಚಿವರು ಈ ಕೂಟದಲ್ಲಿ ಭಾಗಿಯಾಗಿದ್ದರು. ಸಿಎಂ ಉಪಸ್ಥಿತಿಯಲ್ಲಿ ನಡೆದಿರುವ ಮೀಟಿಂಗ್ನಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಚರ್ಚೆ ನಡೆಸಿರುವ ಸಾಧ್ಯತೆಯಿದೆ.
ಮೆಗಾ ಮೀಟಿಂಗ್ನಲ್ಲಿ ಡಾ. ಜಿ ಪರಮೇಶ್ವರ್, ಕೆ.ಎನ್ ರಾಜಣ್ಣ, ಡಾ ಹೆಚ್ ಸಿ ಮಹದೇವಪ್ಪ, ಒಟ್ಟು 7 ಸಚಿವರು 35 ಶಾಸಕರು ಪಾಲ್ಗೊಂಡಿದ್ದರು. ಸಿದ್ದು ಬಣದಿಂದ ಇದೇ ಮೊದಲ ಬಾರಿ ಇಷ್ಟು ದೊಡ್ಡ ಮೀಟಿಂಗ್ ನಡೆದಿದ್ದು, ಇದು ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ಇದನ್ನೂ ಓದಿ : ಎಲಿಮಿನೇಷನ್‌ನಲ್ಲಿ ಬಿಗ್ ಟ್ವಿಸ್ಟ್ – ಈ ವಾರ ಬಿಗ್ಬಾಸ್ ಮನೆಯಿಂದ ಆಚೆ ಬರೋದ್ಯಾರು?