ಬೆಳಗಾವಿ : ಪೊಲೀಸ್ ಠಾಣೆ ಆವರಣದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದ ಸಂಚಾರಿ ಪೊಲೀಸ್ ಠಾಣಾ ಆವರಣದಲ್ಲಿ ಶವ ಸಿಕ್ಕಿದೆ. ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್ ಹಿಂಬದಿಯ ಸೀಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಅಂದಾಜು 40-45 ವರ್ಷದ ವ್ಯಕ್ತಿಯ ಮೃತದೇಹ ಎಂದು ಅಂದಾಜಿಸಲಾಗಿದೆ. ಕಳೆದ ಹದಿನೈದು ದಿನಗಳ ಹಿಂದೆಯೇ ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ.
ಸದ್ಯ ಶವ ಕೊಳೆತ ಕಾರಣ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಘಟನೆ ಸಂಬಂಧ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಸ್ಥಳಕ್ಕೆ ಕ್ಯಾಂಪ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯೋ ಅಥವಾ ಸಹಜ ಸಾವೋ ಎಂಬುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬರ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ರಾಜ್ಯ ಸರ್ಕಾರ..!
Post Views: 207