ಬೆಂಗಳೂರು : ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ಬಗ್ಗೆ ರಾಜ್ಯಾದ್ಯಂತ ಅನುಮಾನ ಹೆಚ್ಚಾಗ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಹಾಗಾಗಿ ಈ ಸಂಬಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಪರಿಶೀಲನಾ ಸಭೆ ನಡೆಸಲಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚಿಸಲಿದ್ದಾರೆ. ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಭಾಗಿಯಾಗುವ ಸಾಧ್ಯತೆಯಿದೆ.
ಗುರುವಾರವೂ ಬಿಮ್ಸ್ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರ ಸಾವನ್ನಪ್ಪಿದ್ದು, ಆಸ್ಪತ್ರೆ ವೈದ್ಯರ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದರು. ಹೀಗಾಗಿ ಪರೀಶಿಲನಾ ಸಭೆ ಕರೆದಿರುವ ಸಿಎಂ ಸಿದ್ದರಾಮಯ್ಯ ಅವರು, ಸಾವಿಗೆ ಕಾರಣಗಳೇನು ಎಂಬ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ಇದನ್ನೂ ಓದಿ : ಸಚಿವ ಜಮೀರ್ ಪುತ್ರನ ಸಿನಿಮಾ ಟೀಂ ಯಡವಟ್ಟು – ಕಲ್ಟ್ ಮೂವಿ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ.. ಆಗಿದ್ದೇನು?
Post Views: 33