ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಾಗಿದಕ್ಕೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾ ಅಂಬರೀಶ್ ಅವರಿಗೆ ನಿರಾಸೆಯಾಗಿತ್ತು. ಹೀಗಾಗಿ ಮೌನಕ್ಕೆ ಜಾರಿರುವ ಸುಮಲತಾ ಅಂಬರೀಶ್ ಅವರು ತಮ್ಮ ನಡೆ ಏನು ಎನ್ನುವುದನ್ನು ಇಂದು ಘೋಷಣೆ ಮಾಡಲಿದ್ದಾರೆ. ಇದರೊಂದಿಗೆ ನಿನ್ನೆ ತಮ್ಮ ಅಭಿಮಾನಿಗಳಿಗೊಂದು ಸಾಮಾಜಿಕ ಜಾಲತಾಣ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಸಂದೇಶ ರವಾನಿಸಿದ್ದರು.
ಇಂದು ಮಂಡ್ಯದಲ್ಲೇ ತಮ್ಮ ನಿರ್ಧಾರ ತಿಳಿಸಲಿರುವ ಸಂಸದೆ ಸುಮಲತಾ ಅವರು ಬೆಳಗ್ಗೆ ಮಂಡ್ಯದ ಕಾಳಿಕಾಂಭ ಸಮುದಾಯ ಭವನದಲ್ಲಿ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಸಂಸದೆ ಸುಮಲತಾ ಅಂಬರೀಶ್ ನಿರ್ಧಾರ ಏನು..? ಮೈತ್ರಿ ಧರ್ಮವನ್ನು ಪಾಲನೆ ಮಾಡ್ತಾರಾ? ಇಲ್ಲ ಪಕ್ಷೇತರವಾಗಿ ಸ್ಪರ್ಧೆ ಮಾಡ್ತಾರಾ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.
ಈಗಾಗಲೇ ಸುಮಲತಾ ಬೆಂಬಲ ಕೇಳಿರುವ ಮಾಜಿ ಸಿಎಂ ಹೆಚ್ಡಿಕೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಸಂಸದೆ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯಕ್ಕೆ ತೆರಳುವ ಮುನ್ನ ಪೋಸ್ಟ್ ಮಾಡಿರುವ ಸುಮಲತಾ ಅವರು, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಏನೇ ನಿರ್ಧಾರ ತಗೆದುಕೊಂಡರು ನಿಮ್ಮೊಂದಿಗೆ ಚರ್ಚಿಸಿ ಕೈಗೊಳ್ಳುವೆ ಎಂದು ಸೋಷಿಯಲ್ ಮೀಡಿಯಾ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಪ್ರಮುಖವಾಗಿ ಸಂಸದೆ ಸುಮಲತಾ ಅವರು ಪೋಸ್ಟ್ನಲ್ಲಿ ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ ಎಂಬ ಒಂದು ಮಾತು ಅವರು ಮೈತ್ರಿ ಪರವಾಗಿ ಕೆಲಸ ಮಾಡೋ ನಿರ್ಧಾರ ಪ್ರಕಟಿಸೋದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಇನ್ನು ಸುಮಲತಾ ಅವರು ಅಧಿಕೃತವಾಗಿ ತಮ್ಮ ನಿಲುವ ಸ್ಪಷ್ಟಪಡಿಸುವ ಮೂಲಕ ಕುತೂಹಲಕ್ಕೆ ತೆರೆ ಬೀಳಲಿದೆ.
ಇದನ್ನೂ ಓದಿ : ದ್ವೀಪರಾಷ್ಟ್ರ ತೈವಾನ್ನಲ್ಲಿ 7.5 ತೀವ್ರತೆಯ ಭಾರೀ ಭೂಕಂಪ – ಸುನಾಮಿ ಅಲರ್ಟ್..!