Download Our App

Follow us

Home » ರಾಜಕೀಯ » 14 ಸೈಟ್​ ​ಹಿಂದಿರುಗಿಸಲು ನಿರ್ಧಾರ – ಮುಡಾಗೆ ಸಿಎಂ ಪತ್ನಿ ಬರೆದ ಪತ್ರದಲ್ಲೇನಿದೆ?

14 ಸೈಟ್​ ​ಹಿಂದಿರುಗಿಸಲು ನಿರ್ಧಾರ – ಮುಡಾಗೆ ಸಿಎಂ ಪತ್ನಿ ಬರೆದ ಪತ್ರದಲ್ಲೇನಿದೆ?

ಬೆಂಗಳೂರು : ಮುಡಾ ಹಗರಣ ಪ್ರಕರಣ ಸಿಎಂ ಸಿದ್ದರಾಮಯ್ಯನವರಿಗೆ ತೀವ್ರ ಸಂಕಷ್ಟ ತಂದೊಡ್ಡಿರುವ ಬೆನ್ನಲ್ಲೇ ಪತ್ನಿ ಪಾರ್ವತಿ ಅವರು ಮುಡಾಗೆ ಸೈಟ್​ಗಳನ್ನು ಹಿಂದಿರುಗಿಸಲು ಮುಂದಾಗಿದ್ದಾರೆ. 14 ಸೈಟ್​ ​ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯನವರಿಗೆ ರಾಜಕೀಯ ಜೀವನದ ಮೇಲಾಗುತ್ತಿರುವ ಅವಮಾನ, ಕಳಂಕವನ್ನು ನೋಡಲಾಗದೇ ಪಾರ್ವತಿ ಅವರು ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಖುದ್ದು ಮುಡಾಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಈ ಮೂಲಕ ಈ ಮುಡಾ ಹಗರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಸಿಎಂ ಪತ್ನಿ ಬರೆದ ಪತ್ರದಲ್ಲೇನಿದೆ? ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಪತ್ರ ಉಲ್ಲೇಖಿಸಲಾಗಿದೆ.

ಮುಂದುವರಿದು, ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು.

ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ. ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ.

ಈ ಬಗ್ಗೆ ನಾನು ಗಂಡ ಹಾಗೂ ಕುಟುಂಬದ ಜೊತೆ ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ.  ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ.

ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಸೂಪರ್​​ಸ್ಟಾರ್​​​ ರಜಿನಿಕಾಂತ್ ದಿಢೀರ್ ಆಸ್ಪತ್ರೆಗೆ ದಾಖಲು – ಶೀಘ್ರ ಚೇತರಿಕೆಗೆ ಫ್ಯಾನ್ಸ್ ಪ್ರಾರ್ಥನೆ..!

Leave a Comment

DG Ad

RELATED LATEST NEWS

Top Headlines

ಬಿಗ್​ಬಾಸ್ ನಾವು ಇನ್ಮೇಲೆ ಯಾವ ಗೇಮೂ ಆಡಲ್ಲ – ಕ್ಯಾಪ್ಟನ್ ವಿರುದ್ಧ ತಿರುಗಿ ಬಿದ್ದ ನರಕವಾಸಿಗಳು.. ಅಂಥದ್ದೇನಾಯ್ತು?

ಬಿಗ್​ಬಾಸ್ ಕನ್ನಡ ಸೀಸನ್ 11 ಸಖತ್ ಇಂಟ್ರೆಸ್ಟಿಂಗ್ ಆಗಿ ಮೂಡಿ ಬರುತ್ತಿದೆ. ಈ ಬಾರಿ 17 ಮಂದಿ ಕಂಟೆಸ್ಟೆಂಟ್ಸ್ ಮನೆಯೊಳಗೆ ಎಂಟ್ರಿ ಕೊಟ್ಟಿದ್ದು, ಮೊದಲ ವಾರದಲ್ಲಿ ಯಮುನಾ

Live Cricket

Add Your Heading Text Here